ಸಾಹುಕಾರನ ರಾಸಲೀಲೆ: ರಮೇಶ್ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ!

ಸಾಹುಕಾರನ ರಾಸಲೀಲೆ ವೀಡಿಯೋ ಸಂಬಂಧಿಸಿದಂತೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ಕೊಡಬೇಕು ಎಂದು ಬೆಳಗಾವಿಯಲ್ಲಿ ಜೆಡಿಎಸ್ ಪ್ರತಿಭಟನೆ ಮಾಡುತ್ತಿದ್ಧಾರೆ.

ಈ ಬಗ್ಗೆ ದೆಹಲಿಯ ಬಿಜೆಪಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಯುತ್ತದೆ. ರಾಜ್ಯ ಉಸ್ತುವಾರಿ ನಾಯಕರಾದ ಅರುಣ್ ಸಿಂಗ್ ಮತ್ತು ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ, ಬಿಎಲ್ ಸಂತೋಷ್ ಜೊತೆ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಸುತ್ತಿದ್ದಾರೆ.

ರಾಜ್ಯದಲ್ಲಿಯೂ ಸಿಎಂ ಯಡಿಯೂರಪ್ಪ ಜೊತೆ ಸಚಿವರು ರಮೇಶ್ ರಾಜೀನಾಮೆ ಕೊಡಬೇಕಾ ಬೇಡವಾ? ಎನ್ನುವ ಬಗ್ಗೆ ಸಮಗ್ರ ಚರ್ಚೆ ನಡೆಸಲಾಗುತ್ತಿದೆ.

ಪ್ರವಾಸೋದ್ಯಮ ಸಚಿವ, ಸಿಪಿ ಯೋಗೇಶ್ವರ್ ಈ ಬಗ್ಗೆ ಪ್ರತಿಕ್ರಿಯೆ ನೀಡಿ, “ ಸಂಪೂರ್ಣವಾಗಿ ಏನನ್ನು ಗ್ರಹಿಸಲಾಗುತ್ತಿಲ್ಲ. ರಮೇಶ್ ಹೇಳಿಕೆ ಮೇಲೆ ಸತ್ಯ ಅಸತ್ಯದ ಮೇಲೆ ನಿಂತುಕೊಳ್ಳುತ್ತದೆ. ನೋಡೋಣ ಪಕ್ಷ ಯಾವ ರೀತಿ ತೀರ್ಮಾನ ಕೈಗೊಳ್ಳುತ್ತದೆ” ಎಂದು ಹೇಳಿದ್ದಾರೆ.

ಜೊತೆಗೆ ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮೌನ ಮುರಿದಿದ್ದಾರೆ. ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಪ್ರಕರಣದಲ್ಲಿ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ವಿಪಕ್ಷ ನಾಯಕರು ಒತ್ತಾಯಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights