ಬಾಬರಿ ಮಸೀದಿ ಧ್ವಂಸ ಪ್ರಕರಣ: ಮಹಾರಾಷ್ಟ್ರ ಸಿಎಂ ಉದ್ಧವ್‌ ಠಾಕ್ರೆ ಹೇಳಿಕೆಗೆ ಭಾರೀ ವಿರೋಧ!

ಮಹಾರಾಷ್ಟ್ರ ವಿಧಾನಸಭೆ ಕಲಾಪದ ವೇಳೆ ಮಾತನಾಡಿದ್ದ ಸಿಎಂ ಉದ್ದವ್‌ ಠಾಕ್ರೆ, ಬಾಬರಿ ಮಸೀದಿ ಧ್ವಂಸಗೊಂಡ ನಂತರದಲ್ಲಿ ಅದನ್ನು ಬಾಳಾ ಠಾಕ್ರೆಯವರು ಪ್ರಬಲವಾಗಿ ಸಮರ್ಥಿಸಿಕೊಂಡಿದ್ದರು ಎಂದು ಹೇಳಿಕೆ ನೀಡಿದ್ದು, ಅವರ ಈ ಹೇಳಿಕೆಗೆ ವಿರೋಧ ವ್ಯಕ್ತಾಗುತ್ತಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿಯ ಹೇಳಿಕೆಯನ್ನು ತೀಕ್ಷ್ಣವಾಗಿ ಖಂಡಿಸಿರುವ ಸಮಾಜವಾದಿ ಪಕ್ಷದ ನಾಯಕ ಅಬು ಅಜ್ಮಿ ಅವರು, ಉದ್ದವ್‌ ಠಾಕ್ರೆ ಶಿವಸೇನಾ ಪಕ್ಷದ ಮುಖ್ಯಸ್ಥರು ಮಾತ್ರವಲ್ಲ, ಅವರು ಒಂದು ರಾಜ್ಯದ ಸಿಎಂ ಎಂಬುದನ್ನು ಮರೆಯಬಾರದು ಎಂದು ಕಿಡಿಕಾರಿದ್ದಾರೆ.

ಉದ್ದವ್‌ ಠಾಕ್ರೆಯವರ ಹೇಳಿಕೆಯನ್ನು ಖಂಡಿಸಿ, ಅವರ ಸಚಿವ ಸಂಪುಟದಲ್ಲಿರುವ ಮುಸ್ಲಿಂ ಸಚಿವರು ತಮ್ಮ ಮಂತ್ರಿಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಹೇಳಿದ್ದಾರೆ.

ಶಿವಸೇನಾ-ಕಾಂಗ್ರೆಸ್‌-ಎನ್‌ಸಿಪಿ ಮೈತ್ರಿ ಪಕ್ಷಗಳು ಉದ್ಯೋಗ ಹಾಗೂ ಶಿಕ್ಷಣದಲ್ಲಿ ಶೇಕಡ 5ರಷ್ಟು ಮೀಸಲಾತಿ ನೀಡುವುದಾಗಿ ಹೇಳಿದ್ದವು. ಆದರೆ ಇದ್ಯಾವುದೂ ಕಾರ್ಯರೂಪಕ್ಕೆ ಬಂದಿಲ್ಲ. ಠಾಕ್ರೆ ಹೇಳಿಕೆ ಹಾಗೂ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಸಮುದಾಯದ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅಜ್ಮಿ ಒತ್ತಾಯಿಸಿದ್ದಾರೆ.

ಮಾಜಿ ಕಾಂಗ್ರೆಸ್‌ ಸಂಸದ ಸಂಜಯ್‌ ನಿರುಪಮ್‌ ಅವರು ಸಹ ಠಾಕ್ರೆ ಹೇಳಿಕೆಯನ್ನು ಖಂಡಿಸಿದ್ದಾರೆ.

ಇದನ್ನೂ ಓದಿ: ಕೃಷಿ ಕಾನೂನುಗಳನ್ನು ಅಮೆರಿಕಾ ಬೆಂಬಲಿಸಿದೆ ಎಂದು ಭಾರತೀಯ ಮಾಧ್ಯಮಗಳು ಸುದ್ದಿ ಪ್ರಕಟಿಸಿವೆ: ಆದರೆ ಅದು ಸುಳ್ಳು!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights