ನಟ ಸುಶಾಂತ್ ಡ್ರಗ್ಸ್ ಪ್ರಕರಣ : ಎನ್‌ಸಿಬಿಯಿಂದ 30,000 ಪುಟಗಳ ಚಾರ್ಜ್‌ಶೀಟ್!

ಸುಶಾಂತ್ ಸಿಂಗ್ ರಜಪೂತ್ ಡ್ರಗ್ಸ್ ಪ್ರಕರಣದಲ್ಲಿ ಎನ್‌ಸಿಬಿ 30,000 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಲಿದೆ.

ನಾಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಶುಕ್ರವಾರ ಸುಶಾಂತ್ ಸಿಂಗ್ ರಜಪೂತ್ ಡ್ರಗ್ಸ್ ಪ್ರಕರಣದಲ್ಲಿ ತನ್ನ ಚಾರ್ಜ್‌ಶೀಟ್ ಸಲ್ಲಿಸಲಿದೆ. ಎನ್‌ಸಿಬಿ ಮುಖ್ಯಸ್ಥ ಸಮೀರ್ ವಾಂಖೆಡೆ ಸ್ವತಃ ಚಾರ್ಜ್‌ಶೀಟ್ ಸಲ್ಲಿಸಲಿದ್ದು ಅದು 30,000 ಪುಟಗಳಷ್ಟು ಉದ್ದವಾಗಿದೆ ಎಂದು ಹೇಳಲಾಗಿದೆ.

ಡ್ರಗ್ಸ್ ಪ್ರಕರಣದಲ್ಲಿ ಒಂದು ತಿಂಗಳು ಜೈಲಿನಲ್ಲಿದ್ದ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಗೆಳತಿ ರಿಯಾ ಚಕ್ರವರ್ತಿ ಅವರನ್ನು ಎನ್‌ಸಿಬಿ ಚಾರ್ಜ್‌ಶೀಟ್‌ನಲ್ಲಿ ಹೆಸರಿಸಿದೆ.

2020 ಜೂನ್ 14ರಂದು ಸುಶಾಂತ್ ಸಿಂಗ್ ರಜಪೂತ್ ಬಾಂದ್ರಾದಲ್ಲಿನ ತಮ್ಮ ನಿವಾಲದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸುಶಾಂತ್ ಆತ್ಮಹತ್ಯೆ ಪ್ರಕರಣ ಡ್ರಗ್ ಕೇಸ್ ನಲ್ಲಿ ತಳುಕು ಹಾಕಿಕೋಮಡಿತ್ತು. ಇದರ ಬಗ್ಗೆ ವಿಚಾರಣೆ ನಡೆಸುತ್ತಿದ್ದ ಎನ್ಸಿಬಿ 30,000 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಲಿದೆ.

1981 ಜನವರಿ 21ರಂದು ಬಿಹಾರದ ಪಾಟ್ನಾದಲ್ಲಿ ಜನಿಸಿದ್ದ ಸುಶಾಂತ್ ಸಿಂಗ್ , ಪವಿತ್ರ ರಿಶ್ತಾ ಸೀರಿಯಲ್ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದ್ದರು. ” ಕಾಯ್ ಪೋ ಚೇ’ ಸಿನಿಮಾ ಮೂಲಕ ಮೊದಲ ಬಾರಿಗೆ ಬಾಲಿವುಡ್ ಪ್ರವೇಶಿಸಿದ್ದ ಸುಶಾಂತ್ ಸಿಂಗ್, 11 ಚಿತ್ರಗಳಲ್ಲಿ ನಟಿಸಿದ್ದು, ಫಿಲಂ ಫೇರ್ ಪ್ರಶಸ್ತಿಗೂ ಭಾಜನರಾಗಿದ್ದರು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights