66 ವರ್ಷ ವಯಸ್ಸಾಗಿದೆ; ನನ್ನ ಕೊನೆ ಚುನಾವಣೆಗೆ ಟಿಕೆಟ್‌ ಕೊಡಿ; BJP ಮುಂದೆ ಪ್ರಮೋದ್ ಮುತಾಲಿಕ್

ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ. ಆ ಚುನಾವಣೆಯಲ್ಲಿ ತನಗೆ ಟಿಕೆಟ್‌ ನೀಡಬೇಕು ಎಂದು ಬಿಜೆಪಿ ನಾಯಕರಲ್ಲಿ ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ ಮುತಾಲಿಕ್ ಕೇಳಿದ್ದಾರೆ.

ತಮಗೆ ಈಗಾಗಲೇ 66 ವರ್ಷ ವಯಸ್ಸಾಗಿದೆ. ಹೀಗಾಗಿ ಬಿಜೆಪಿ ನಿಯಮದ ಪ್ರಕಾರ ಇದೇ ತಮ್ಮ ಕೊನೆ ಚುನಾವಣೆಯಾಗಲಿದೆ. ಅದಕ್ಕಾಗಿ ಉಪಚುನಾವಣೆಗೆ ತಮಗೆ ಟಿಕೆಟ್‌ ನೀಡಬೇಕು ಎಂದು ಬಿಜೆಪಿಯ ಮುಂದೆ ಬೇಡಿಕೆ ಇಟ್ಟಿದ್ದಾರೆ.

ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುವ ಆಕಾಂಕ್ಷೆ ಹೊಂದಿದ್ದೇನೆ. ಟಿಕೆಟ್‌ಗಾಗಿ ಪಕ್ಷದ ವರಿಷ್ಠರಿಗೆ ಮನವಿ ಮಾಡಿದ್ದೇನೆ. ಅದಕ್ಕೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಹೀಗಾಗಿ ಟಿಕೆಟ್ ಸಿಗುವ ಭರವಸೆ ಇದೆ ಎಂದು ಅವರು ಹೇಳಿದ್ದಾರೆ.

ಬಿಜೆಪಿಯಿಂದ ಟಿಕೆಟ್‌ ದೊರೆತರೆ ಇನ್ನೂ ಮೂರು ವರ್ಷ ಅವಧಿ ಇರಲಿದೆ. ಈ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದರೆ ಆ ಕ್ಷೇತ್ರದ ಅಭಿವೃದ್ಧಿ, ಹಿಂದುತ್ವದ ಕೆಲಸ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಒಂದು ವೇಳೆ ಟಿಕೆಟ್‌ ಸಿಗದೆ ಸುರೇಶ್‌ ಅಂಗಡಿಯವರ ಕುಟುಂಬಕ್ಕೋ, ಜಗದೀಶ್‌ ಶೆಟ್ಟರ್‌ ಕುಟುಂಬಕ್ಕೋ ಕೊಟ್ಟರೆ ಅವರು ನನ್ನನ್ನು ಪ್ರಚಾರಕ್ಕೆ ಕರೆದರೆ ಅವರ ಪರವಾಗಿ ಚುನಾವಣೆ ಪ್ರಚಾರ ಮಾಡುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ: AIADMK ಜೊತೆಗೆ BJP ಮೈತ್ರಿ ಮಾಡಿಕೊಂಡಿರುವ ಉದ್ದೇಶ ಆ ಪಕ್ಷವನ್ನು ಮುಗಿಸುವುದು: ದಿನೇಶ್ ಗುಂಡೂರಾವ್

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights