ಬಾಲಕಿ ಮೇಲೆ 08 ದಿನಗಳ ಕಾಲ ನಿರಂತರ ಸಾಮೂಹಿಕ ಅತ್ಯಾಚಾರ; ನಾಲ್ವರ ಬಂಧನ

ಬಾಲಕಿಯೊಬ್ಬಳನ್ನು ಪುಸಲಾಯಿಸಿ ಕೊರೆದೊಯ್ದು 09 ಮಂದಿ ಕಾಮುಕರು 08 ದಿನಗಳ ನಿರಂತರ ಅತ್ಯಾಚಾರ ಎಸಗಿರುವ ಘಟನೆ ರಾಜಸ್ಥಾನದ ಜವಹರಲಾಲ್‌ ಜಿಲ್ಲೆಯಲ್ಲಿ ನಡೆದಿದೆ.

ಆಕೆಯ ಕುಟುಂಬದವರು ಬಾಲಕಿ ಕಾಣೆಯಾಗಿರುವುದಾಗಿ ದೂರು ನೀಡಿದ ಬಳಿಕ ಆಕೆಯನ್ನು ರಕ್ಷಿಸಲಾಗಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಆರೋಪಿಯಾತ ಬುಲ್‌ಬುಲ್‌ ಹಾಗೂ ಮತ್ತೊಬ್ಬ ಯುವಕ ಬಾಲಕಿಗೆ ಬ್ಯಾಗ್‌‌ ಕೊಡಿಸುವುದಾಗಿ ಆಮಿಷವೊಡ್ಡಿ ಜವಹರಲಾಲ್‌ ನಗರಕ್ಕೆ ಕರೆದೊಯ್ದಿದ್ದಾರೆ. ಅಲ್ಲಿನ ಪಾರ್ಕ್‌ವೊಂದರಲ್ಲಿ ಆ ಇಬ್ಬರು ಮತ್ತು ಇತರ ಕೆಲವರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಅಲ್ಲದೆ, ನಗರದ ವಿವಿಧ ಪ್ರದೇಶಗಳಿಗೆ ಆಕೆಯನ್ನು ಕೊಂಡೊಯ್ಯಲಾಗಿದ್ದು, 08 ದಿನಗಳ ಕಾಲ ಅತ್ಯಾಚಾರ ಎಸಗಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರು ಅಪ್ರಾಪ್ತ ಬಾಲಕರು ಹಾಗೂ ಮತ್ತಿಬ್ಬರು ಯುವಕರನ್ನು ಬಂಧಿಸಲಾಗಿದೆ ಎಂದು ಡಿಸಿಪಿ ಮಂಜೀತ್​ ಸಿಂಗ್​ ತಿಳಿಸಿದ್ದಾರೆ.

ಬಾಲಕಿಯನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಉಳಿದ ಆರೋಪಿಗಳಿಗಾಗಿ ಶೋಧಕಾರ್ಯ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಿಲಿಟರಿ ಕ್ಯಾಂಪ್‌ನಲ್ಲಿ ಸ್ಫೋಟ : 20 ಮಂದಿ ಸಾವು :600ಕ್ಕೂ ಹೆಚ್ಚು ಮಂದಿಗೆ ಗಾಯ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights