ಸಿಂಧಿಯಾ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಆಗಬಹುದಿತ್ತು; BJP ಸೇರಿ ಲಾಸ್ಟ್‌ಬೆಂಚ್‌ನಲ್ಲಿ ಕುಳಿತಿದ್ದಾರೆ: ರಾಹುಲ್‌ಗಾಂಧಿ

ಮಧ್ಯಪ್ರದೇಶದ ಬಿಜೆಪಿ ನಾಯಕ ಜ್ಯೋತಿರಾಧಿತ್ಯ ಸಿಂಧಿಯಾ ಅವರು ಕಾಂಗ್ರೆಸ್‌ನಲ್ಲಿಯೇ ಉಳಿದಿದ್ದರೆ ಮುಖ್ಯಮಂತ್ರಿಯಾಗಬಹುದಿತ್ತು. ಆದರೆ, ಬಿಜೆಪಿಗೆ ಸೇರಿ ಲಾಸ್ಟ್ ಬೆಂಚ್‌ನಲ್ಲಿ ಕುಳಿತಿದ್ದಾರೆ ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ಗಾಂಧಿ ಹೇಳಿದ್ದಾರೆ.

ಕಾಂಗ್ರೆಸ್‌ನ ಯುವ ವಿಭಾಗವನ್ನು ಉದ್ದೇಶಿಸಿ ಮಾತನಾಡಿರುವ ಅವರು, ಸಿಂಧಿಯಾ ಕಾಂಗ್ರೆಸ್‌ ಜೊತೆ ಉಳಿದಿದ್ದರೆ ಮಧ್ಯಪ್ರದೇಶದಲ್ಲಿ ಮುಖ್ಯಮಂತ್ರಿಯಾಗಬಹುದಿತ್ತು. ಆದರೆ, ಪಕ್ಷ ತೊರೆದು ಬಿಜೆಪಿ ಸೇರಿದರು. ಈಗ ಅವರು ಬಿಜೆಪಿ ಬೆನ್ನಹಿಂದೆ ಕೆಲಸ ಮಾಡುತ್ತಿದ್ದಾರೆ. ಸಿಂಧಿಯಾ ಅವರಿಗೆ ಕಾಂಗ್ರೆಸ್‌ ಕಾರ್ಯಕರ್ತರೊಂದಿಗೆ ಕೆಲಸ ಮಾಡುವ ಮೂಲಕ ಪಕ್ಷದ ಸಂಘಟನೆಯನ್ನು ಬಲಪಡಿಸುವ ಆಯ್ಕೆಯಿತ್ತು. ನೀವು ಒಂದು ದಿನ ಮುಖ್ಯಮಂತ್ರಿಯಾಗುತ್ತೀರಿ ಎಂದು ನಾನು ಅವರಿಗೆ ಹೇಳಿದ್ದೆ. ಆದರೆ, ಅವರು ಬೇರೊಂದು ಮಾರ್ಗವನ್ನು ಆರಿಸಿಕೊಂಡು ಹೋದರು” ಎಂದು ಹೇಳಿದ್ದಾರೆ.

ಒಂದು ವಿಚಾರವನ್ನು ನೆನಪಿಟ್ಟುಕೊಳ್ಳಿ, ಅವರು ಬಿಜೆಪಿಯಲ್ಲಿ ಎಂದಿಗೂ ಮುಖ್ಯಮಂತ್ರಿಯಾಗುವುದಿಲ್ಲ. ಅದಕ್ಕಾಗಿ ಅವರು ಮತ್ತೆ ಕಾಂಗ್ರೆಸ್‌ಗೆ ಹಿಂದಿರುಗಬೇಕಾಗುತ್ತದೆ ಎಂದು ರಾಹುಲ್‌ಗಾಂಧಿ ಹೇಳಿದ್ದಾರೆ.

ಆರ್‌ಎಸ್‌ಎಸ್‌ನ ಸಿದ್ಧಾಂತದ ವಿರುದ್ಧ ಹೋರಾಡಲು ಯಾರಿಗೂ ಹೆದರಬೇಡಿ.ಧೈರ್ಯದಿಂದ ಅದನ್ನು ನಾವು ಎದುರಿಸಬೇಕು ಎಂದು ಪಕ್ಷದ ಯುವ ಕಾರ್ಯಕರ್ತರಿಗೆ ಅವರು ಧೈರ್ಯ ತುಂಬಿಸಿದ್ದಾರೆ.

ಸಿಂಧಿಯಾ ಅವರು ತಮ್ಮ ಬೆಂಬಲಿಗರೊಂದಿಗೆ 2020ರ ಮಾರ್ಚ್‌ನಲ್ಲಿ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದರು. ಇದರಿಂದಾಗಿ ಮಧ್ಯಪ್ರದೇಶದ ಕಾಂಗ್ರೆಸ್‌ ಸರ್ಕಾರ ಪತನಗೊಂಡು, ಬಿಜೆಪಿ ಅಧಿಕಾರಕ್ಕೆ ಬಂದಿದೆ. ಶಿವರಾಜ್‌ ಸಿಂಗ್‌ ಚೌಹಾಣ್‌ ಮುಖ್ಯಮಂತ್ರಿಯಾಗಿದ್ದಾರೆ.

ಇದನ್ನೂ ಓದಿ: ರಾಮ ಮಂದಿರಕ್ಕೆ ದೇಣಿಗೆ ನೀಡಲು ಒಪ್ಪದ ಶಿಕ್ಷಕ; ವೃತ್ತಿಯಿಂದ ವಜಾಗೊಳಿಸಿದ ಶಾಲೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights