ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ರಾಜೀನಾಮೆ!

ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ರಾಜೀನಾಮೆ ನೀಡಿದ್ದಾರೆ.

ಮುಂದಿನ ಫೆಬ್ರವರಿಯಲ್ಲಿ ಉತ್ತರಖಂಡ್ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ವೇಳೆ ರಾವತ್ ಅವರು ಬಿಜೆಪಿ ಸ್ಥಳೀಯ ಶಾಸಕರು ಹಾಗೂ ಜನರ ಮೆಚ್ಚುಗೆ ಗಳಿಸಲು ವಿಫಲರಾಗಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಹೀಗಾಗಿ ತನ್ನಿಂದ ಪಕ್ಷಕ್ಕೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹಿನ್ನಡೆಯಾಗಬಾರದು ಎನ್ನುವ ಕಾರಣ ನೀಡಿ ರಾಜೀನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ.

60 ವರ್ಷದ ಶ್ರೀ ರಾವತ್ ಅವರು ತಮ್ಮ ರಾಜೀನಾಮೆಯನ್ನು ಸ್ವಲ್ಪ ಸಮಯದ ಹಿಂದೆ ರಾಜ್ಯಪಾಲ ಬೇಬಿ ರಾಣಿ ಮೌರ್ಯ ಅವರಿಗೆ ನೀಡಿದ್ದಾರೆ.

ರಾವತ್ ಅವರ ಕಾರ್ಯ ವೈಖರಿ ವಿರೋಧಿಸಿ ಹೈಕಮಾಂಡ್‌ಗೂ ಕೆಲವರು ದೂರು ಸಲ್ಲಿಸಿದ್ದಾರೆ. ಹೀಗಾಗಿ ರಮಣ್ ಸಿಂಗ್ ಹಾಗೂ ದುಷ್ಯಂತ್ ಸಿಂಗ್ ಸಮಿತಿಯು ಎಲ್ಲಾ ಶಾಸಕರ ಅಭಿಪ್ರಾಯ ಸಂಗ್ರಹಿಸಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ವರದಿ ಸಲ್ಲಿಸಿತ್ತು. ಈ ವರದಿ ಆಧರಿಸಿ ರಾಜೀನಾಮೆ ನೀಡಿದ್ದಾರೆನ್ನಲಾಗುತ್ತಿದೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights