ಮಾರ್ಚ್‌ 26ರಂದು ಸಂಪೂರ್ಣ ಭಾರತ್‌ ಬಂದ್; ಕೃಷಿ ಕಾಯ್ದೆಗಳ ವಿರುದ್ಧ ರೈತರ ಕರೆ!

ರೈತ ವಿರೋಧಿ ಕೃಷಿ ನೀತಿಗಳ ವಿರುದ್ಧ ದೆಹಲಿ ಗಡಿಯಲ್ಲಿ ರೈತರ ಹೋರಾಟ 100 ದಿನಗಳನ್ನು ದಾಟಿದೆ. ಹೀಗಿದ್ದರೂ, ರೈತರ ಬೇಡಿಕೆಗೆ ಸರ್ಕಾರ ಸ್ಪಂದಿಸದ ಕಾರಣದಿಂದಾಗಿ ಮಾರ್ಚ್‌ 26ರಂದು ಸಂಪೂರ್ಣ ಭಾರತ್ ಬಂದ್‌ಗೆ ರೈತರು ಕರೆ ಕೊಟ್ಟಿದ್ದಾರೆ.

ಇದೇ ಮಾರ್ಚ್‌ 26ಕ್ಕೆ ರೈತರು ಪ್ರತಿಭಟನೆ ಆರಂಭಿಸಿ ನಾಲ್ಕನೇ ತಿಂಗಳಿಗೆ ಕಾಲಿಡಲಿದೆ. ಈ ಹಿನ್ನೆಲೆಯಲ್ಲಿ ಭಾರತ್‌ ಬಂದ್‌ಗೆ ಕರೆ ನೀಡಿದ್ದು, ಇದಕ್ಕೆ ಅಖಿಲ ಭಾರತ ಬಂದ್‌ಗೆ ಕಾರ್ಮಿಕ ಸಂಘಟನೆಗಳು ಸೇರಿದಂತೆ ಇತರೆ ಸಾಮಾಜಿಕ ಸಂಘಟನೆಗಳ ಬೆಂಬಲವನ್ನು ಕೇಳಲಾಗಿದೆ ಎಂದು ರೈತ ಸಂಘಟನೆಗಳು ಹೇಳಿವೆ.

ಕನಿಷ್ಟ ಬೆಂಬಲೆ ಬೆಲೆ ನಿಗದಿಗೊಳಿಸುವಂತೆ ಮತ್ತು 3 ಕೃಷಿ ಕಾಯ್ದೆಗಳನ್ನು ಹಿಂಪಡೆದುಕೊಳ್ಳುವಂತೆ ದೇಶದಾದ್ಯಂತ ಇರುವ ರೈತರು ಒತ್ತಾಯಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ 2020ರ ನವೆಂಬರ್ ತಿಂಗಳಿನಿಂದಲೂ ಹೋರಾಟ ಮಾಡುತ್ತಿದ್ದಾರೆ.

ಈ ಕುರಿತು ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಹಲವು ಸುತ್ತಿನ ಮಾತುಕತೆಗಳಾಗಿವೆ. ಆದರೆ ಅವುಗಳೆಲ್ಲವೂ ವಿಫಲವಾಗಿವೆ. ನಂತರ ಜ. 26 ರಂದು ಟ್ರ್ಯಾಕ್ಟರ್‌ ರ್ಯಾಲಿಗೆ ರೈತರು ಕರೆ ನೀಡಿದ್ದರು. ಆ ಸಂದರ್ಭದಲ್ಲಿ ನಡೆದ ಕೆಲವು ಅಹಿತಕರ ಘಟನೆಗಳಿಂದ ರೈತ ಹೋರಾಟಕ್ಕೆ ಸ್ವಲ್ಪ ಹಿನ್ನಡೆಯಾಗಿತ್ತು. ಆದರೆ ರಾಕೆಶ್ ಟಿಕಾಯತ್ ಭಾವನಾತ್ಮಕ ಭಾಷಣ ಮಾಡಿದ ನಂತರ ಉತ್ತರ ಭಾರತದಾದ್ಯಂತ ಪ್ರತಿ ಹಳ್ಳಿಗಳಲ್ಲೂ ಮಹಾ ಪಂಚಾಯತ್‌ಗಳನ್ನು ನಡೆಸಿ ಲಕ್ಷಾಂತರ ರೈತ ಬೆಂಬಲಿಗರನ್ನು ಒಟ್ಟಗೂಡಿಸಲಾಗುತ್ತಿದೆ. ಅಂದಿನಿಂದ ರೈತ ಹೋರಾಟ ಮತ್ತಷ್ಟು ಚುರುಕು ಪಡೆದುಕೊಂಡಿದೆ.

ರೈತ ಹೋರಾಟವನ್ನು ಹತ್ತಿಕ್ಕಲು ಸರ್ಕಾರವು ಹಲವು ಅನೈತಿಕ ಮಾರ್ಗಗಳನ್ನು ಪರೋಕ್ಷವಾಗಿ ಅನುಸರಿಸುತ್ತಿದೆ. ಆದರೆ ಹೋರಾಟವನ್ನು ಹಿಮ್ಮೆಟ್ಟಿಸಲು ಸಾಧ್ಯವಾಗಿಲ್ಲ. ಈಗ ರೈತರು ಮತ್ತೊಮ್ಮೆ ದೇಶದಾದ್ಯಂತ ಬಂದ್ ಮಾಡಲು ಕರೆ ನೀಡಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ತನ್ನ ಸಾವಿಗೆ 03 ಕೃಷಿ ಕಾಯ್ದೆಗಳೇ ಕಾರಣ: ಪತ್ರ ಬರೆದಿಟ್ಟು ರೈತ ಆತ್ಮಹತ್ಯೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights