ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ : ರೋಗಿಯ ಸಂಬಂಧಿಯಿಂದಲೇ ದೂರು!
ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ರೋಗಿಯ ರಕ್ತಸಂಬಂಧಿಯೇ ವೈದ್ಯರ ವಿರುದ್ಧ ಎಫ್ಐಆರ್ ದಾಖಲಿಸಿದ ಘಟನೆ ದೆಹಲಿಯ ಹಿಂದೂ ರಾವ್ ಆಸ್ಪತ್ರೆಯಲ್ಲಿ ನಡೆದಿದೆ.
ರಿಕ್ಷಾ ಎಳೆಯುವ ವ್ಯಕ್ತಿ ಶುಕ್ರವಾರ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ. ಮೃತನನ್ನು ಕಬೀರ್ ಬಸ್ತಿ ನಿವಾಸಿ ಸೋನು (34) ಎಂದು ಗುರುತಿಸಲಾಗಿದೆ. ಶುಕ್ರವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ಚಿಕಿತ್ಸೆಯ ಸಮಯದಲ್ಲಿ ಸೋನು ಸಾವನ್ನಪ್ಪಿದ್ದು, ಅದರ ನಂತರ ಅವರ ಕುಟುಂಬ ಸದಸ್ಯರು ಆಸ್ಪತ್ರೆಯ ಆಸ್ತಿಯನ್ನು ಹಾನಿಗೊಳಿಸಿದ್ದಾರೆ. ಮಾತ್ರವಲ್ಲದೇ ಪ್ರಾಣ ಉಳಿಸಲು ವೈದ್ಯರು ಓಡಬೇಕಾಯಿತು ಎಂದು ಮೂಲಗಳು ತಿಳಿಸಿವೆ.
ಈಗ, ಉತ್ತರ ದೆಹಲಿ ಮುನ್ಸಿಪಲ್ ಕಾರ್ಪೋರೇಶನ್ ರನ್-ಆಸ್ಪತ್ರೆಯ ವೈದ್ಯರು ಈ ವಿಷಯದಲ್ಲಿ ಸಾಂಸ್ಥಿಕ ಎಫ್ಐಆರ್ ಒತ್ತಾಯಿಸುತ್ತಿದ್ದಾರೆ.
ಘಟನೆಯ ವೇಳೆ ಆಸ್ಪತ್ರೆಯಲ್ಲಿನ ವಸ್ತುಗಳನ್ನು ಧ್ವಂಸ ಮಾಡಲಾಗಿದೆ.

ಹಿಂದೂ ರಾವ್ ಆಸ್ಪತ್ರೆಯ ನಿವಾಸಿ ವೈದ್ಯರ ಸಂಘದ ಅಧ್ಯಕ್ಷ ಅಭಿಮನ್ಯು ಸರ್ದಾನಾ, ವ್ಯಕ್ತಿಯ ಸಾವಿನ ನಂತರ ನಡೆದ ವಾಗ್ವಾದದ ವೇಳೆ ಇಬ್ಬರು ವೈದ್ಯರು ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ. ಈ ಬಗ್ಗೆ ದೂರು ನೀಡುವುದಾಗಿ ಅವರು ಹೇಳಿದ್ಧಾರೆ.
ಘಟನೆಗೆ ಸಂಬಂಧಿಸಿದಂತೆ ಮೃತ ವ್ಯಕ್ತಿಯ ಕುಟುಂಬ ಸದಸ್ಯರು ದೂರು ಸಲ್ಲಿಸಿದ್ದಾರೆ.

