ಗಡಿ ವಿವಾದ: ಬೆಳಗಾವಿಗೆ ಮಹಾರಾಷ್ಟ್ರದ ಸರ್ವಪಕ್ಷಗಳು ಭೇಟಿ ನೀಡಲು ಶಿವಸೇನಾ ಕರೆ!

ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿಖ್ಯಾತೆಯನ್ನು ಶಿವಸೇನಾ ಮುಂದುವರೆಸಿದೆ. ಕರ್ನಾಟಕದ ಬೆಳಗಾವಿಯಲ್ಲಿ ವಾಸಿಸುತ್ತಿರುವ ಮರಾಠಿ ಜನರು ಬಲಿ ಪಶುಗಳಾಗುತ್ತಿದ್ದಾರೆ. ಹೀಗಾಗಿ ಮಹಾರಾಷ್ಟ್ರದ ಸರ್ವಪಕ್ಷಗಳ ನಿಯೂಗವು ಬೆಳಗಾವಿಗೆ ಭೇಟಿ ನೀಡಿ, ಅಲ್ಲಿನ ವಿದ್ಯಮಾನಗಳನ್ನು ಪರಿಹರಸಬೇಕು ಎಂದು ಶಿವಸೇನಾ ಮುಖಂಡ ಸಂಜತ್‌ ರಾವತ್‌ ಹೇಳಿದ್ದಾರೆ.

ಕಳೆದ ಎಂಟು ದಿನಗಳಲ್ಲಿ ಬೆಳಗಾವಿಯಲ್ಲಿ ಶಿವಸೇನೆ ಮುಖಂಡರು ಮತ್ತು ಪಕ್ಷದ ಕಚೇರಿಯ ಮೇಲೆ ಕನ್ನಡ ಪರ ಸಂಘಟನೆಗಳು ದಾಳಿ ನಡೆಸಿವೆ ಎಂದು ರಾವತ್‌ ಆರೋಪಿಸಿದ್ದಾರೆ.

ಗಡಿಯಲ್ಲಿ ಹೆಚ್ಚಾಗುತ್ತಿರುವ ಸಮಸ್ಯೆಗೆ ಕರ್ನಾಟಕ ಸರ್ಕಾರವೇ ಜವಾಬ್ದಾರಿಯಾಗಿದೆ. ಪರಿಸ್ಥಿತಿ ಕೈತಪ್ಪುತ್ತಿದೆ. ಅದಕ್ಕೆ, ಶಿವಸೇನೆ ಮತ್ತು ಮಹಾರಾಷ್ಟ್ರ ಸರ್ಕಾರವನ್ನು ದೂಷಿಸಬಾರದು ಎಂದು ರಾವತ್‌ ಹೇಳಿದ್ದಾರೆ.

“ಮಹಾರಾಷ್ಟ್ರ ಸರ್ಕಾರವು ದೃಢವಾದ ನಿಲುವನ್ನು ತೆಗೆದುಕೊಳ್ಳಬೇಕಾಗುತ್ತದೆ. ಸರ್ವಪಕ್ಷಗಳ ನಿಯೋಗವು ಶೀಘ್ರದಲ್ಲೇ ಬೆಳಗಾವಿಗೆ ಭೇಟಿ ನೀಡಬೇಕು, ಅಲ್ಲಿ ಮರಾಠಿ ಜನರೊಂದಿಗೆ ಒಗ್ಗಟ್ಟನ್ನು ತೋರಿಸಬೇಕು” ಎಂದು ಅವರು ಹೇಳಿದರು.

ಶಿವಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸುತ್ತಿರುವ ಕರ್ನಾಟಕ ರಕ್ಷಣಾ ವೇದಿಕೆ ಅವರನ್ನು ಬಿಜೆಪಿ ಪ್ರಾಯೋಜಿಸುತ್ತಿದೆ ಎಂದು ಸೇನಾ ನಾಯಕ ಆರೋಪಿಸಿದ್ದಾರೆ.

“ಬಿಜೆಪಿಯ ಯಾರೂ ಇದರ ಬಗ್ಗೆ ಮಾತನಾಡುವುದಿಲ್ಲ. ಶಿವಸೇನೆ ಕೂಡ ಸಮಾನ ಪ್ರಮಾಣದಲ್ಲಿ ಪ್ರತಿಕ್ರಿಯಿಸಬಹುದು, ಆದರೆ ನಾವು ಎರಡು ರಾಜ್ಯಗಳ ನಡುವೆ ಬಿರುಕು ಮೂಡಿಸಲು ಬಯಸುವುದಿಲ್ಲ. ಕೇಂದ್ರವು ಮಧ್ಯಪ್ರವೇಶಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಗಡಿ ವಿವಾದ: ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕೆಂಬ ಒತ್ತಾಯ; ಹಳೇ ದಾಖಲೆಗಳನ್ನು ಬಿಡುಗಡೆ ಮಾಡಿದ ಠಾಕ್ರೆ ಸರ್ಕಾರ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights