ವಿಧಾನಸಭೆಯಿಂದ ಸಂಗಮೇಶ್ ಅಮಾನತು ಖಂಡಿಸಿ ‘ಶಿವಮೊಗ್ಗ ಚಲೋ’ ಪ್ರತಿಭಟನೆ..!

ಬಿಜೆಪಿ ಸರ್ಕಾರ ಕಾಂಗ್ರೆಸ್​ ನಾಯಕರು ಮತ್ತು ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಇಂದು ಶಿವಮೊಗ್ಗ ಚಲೋ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಮುಂದಾಗಿದೆ.

ಕಾಂಗ್ರೆಸ್ ಪಕ್ಷದ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ವಿರುದ್ಧ ಪೊಲೀಸ್ ದೌರ್ಜನ್ಯ ನಡೆದಿದೆ. ಜೊತೆಗೆ ಅವರ ಮೇಲೆ ಕ್ರಿಮಿನಲ್​ ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿ ಕೈ ನಾಯಕರು ಬೀದಿಗಿಳಿದು ಪ್ರತಿಭಟನೆಗೆ ಮುಂದಾಗಿದ್ದಾರೆ.

ಬಿಜೆಪಿ ಸರ್ಕಾರ ಕಾಂಗ್ರೆಸ್​ ನಾಯಕರು ಮತ್ತು ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಕಿರುಕುಳ ನೀಡುತ್ತಿದ್ದಾರೆ. ನಮ್ಮ ಅನೇಕ ಕ್ಷೇತ್ರಗಳಲ್ಲಿನ ಕಾಂಗ್ರೆಸ್​ ಕಾರ್ಯಕರ್ತರಿಗೆ ಬಿಜೆಪಿ ಕಿರುಕುಳ ನೀಡುತ್ತಿದೆ. ಭದ್ರಾವತಿ ಶಾಸಕರ ಮೇಲೆ ಕ್ಷುಲಕ ಪ್ರಕರಣ ದಾಖಲಿಸಿ​ ಬಂಧನ ಮಾಡುವ ಪ್ರಯತ್ನ ನಡೆಸಿದ್ದಾರೆ. ಇದಕ್ಕಾಗಿ ಕಾಂಗ್ರೆಸ್ ಪಕ್ಷ ಶಿವಮೊಗ್ಗ ಚಲೋ ಆಯೋಜಿಸಿದೆ.

ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ದಿನೇಶ್ ಗುಂಡೂರಾವ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬೀದಿಗಿಳಿದು ಹೋರಾಟ ನಡೆಸಲು ಮುಂದಾಗಿದ್ದಾರೆ.

ಬಿಜೆಪಿ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ. ವಿಧಾನಸಭೆಯಿಂದ ಸಂಗಮೇಶ್ ಅವರನ್ನು ಅಮಾನತುಗೊಳಿಸಲಾದ ಆದೇಶವನ್ನು ವಾಪಸ್ ನಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದ ಕೆಎಸ್ಆರ್’ಟಿಸಿ ಬಸ್ ನಿಲ್ದಾಣದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದ್ದು, ಆನಂತರ ಶಿವಮೊಗ್ಗ ಸೈನ್ಸ್ ಮೈದಾನದಲ್ಲಿ ಪ್ರತಿಭಟನಾ ಸಭೆ ಕೂಡ ಹಮ್ಮಿಕೊಂಡಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights