ಮಹಾರಾಷ್ಟ್ರದಲ್ಲಿ ಕೊರೊನಾ ಉಲ್ಬಣ: ಮತ್ತೆ ಮುಂಬೈನಲ್ಲಿ ಲಾಕ್‌ಡೌನ್‌?

ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಮತ್ತೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಬೈ ಸೇರಿದಂತೆ ಹಲವಾರು ಭಾಗಗಳಲ್ಲಿ ಲಾಕ್‌ಡೌನ್‌ ಜಾರಿಗೊಳಿಸಲು ಉದ್ಧವ್‌ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಮುಂದಾಗಿದೆ. ಈ ಬಗ್ಗೆ 48 ಗಂಟೆಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಂಬೈ ಮಹಾನಗರ ಪಾಲಿಕೆ ಮೇಯರ್‌ ಕಿಶೋರ್ ಪಡ್ನೇಕರ್‌ ತಿಳಿಸಿದ್ದಾರೆ.

ಸರ್ಕಾರವು ಈಗಗಾಲೇ ನಾಗ್ಪುರ, ಪುಣೆ ಸೇರಿದಂತೆ ಹಲವು ಜಿಲ್ಲಾ ಕೇಂದ್ರಗಳಲ್ಲಿ ಲಾಕ್‌ಡೌನ್‌ ಜಾರಿಗೊಳಿಸಿದ್ದು, ವಿವಿಧ ನಿರ್ಬಂಧಗಳನ್ನು ವಿಧಿಸಿದೆ. ಆದರೆ, ಇದು ಸಂಪೂರ್ಣ ಲಾಕ್‌ಡೌನ್‌ ಆಗಿರುವುದಿಲ್ಲ, ಬಲದಾಗಿ ಮೈಕ್ರೋ ಲಾಕ್‌ಡೌನ್‌ ಅಥವಾ ಕಂಟೈನ್‌ಮೆಂಟ್‌ ವಲಯಗಳಾಗಿ ಗುರುತಿಸಿ ನಿರ್ಬಂಧಿಸಲಾಗುವುದು ಎಂದು ತಿಳಿದು ಬಂದಿದೆ.

ಹೋಟೆಲ್ ಮತ್ತು ರೆಸ್ಟೋರೆಂಟ್ ಸಂಘಗಳ ಪ್ರತಿನಿಧಿಗಳು ಭಾಗವಹಿಸಿದ ಶನಿವಾರದ ವಾಸ್ತವ ಸಭೆಯನ್ನುದ್ದೇಶಿಸಿ ಮಾತನಾಡಿದ ಠಾಕ್ರೆ, ತಮ್ಮ ಪ್ರದೇಶದಗಳಲ್ಲಿ ಕೊರೊನಾ ಪ್ರೋಟೋಕಾಲ್‌ಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಲಾಕ್‌ಡೌನ್‌ನಂತಹ ಕಠಿಣ ಕ್ರಮಗಳನ್ನು ಜಾರಿಗೆ ತರಲು ರಾಜ್ಯವನ್ನು ಒತ್ತಾಯಿಸಬಾರದು ಎಂದು ತಿಳಿಸಿದ್ದಾರೆ.

ಸಭೆ, ಸಮಾರಂಭಗಳ ನಿರ್ಬಂಧ, 25% ನೌಕರರೊಂದಿಗೆ ಸರ್ಕಾರಿ-ಖಾಸಗಿ ಸಂಸ್ಥೆಗಳ ಕಾರ್ಯಚಟುವಟಿಕೆ ಸೇರಿದಂತೆ ಹಲವಾರು ಮಾನದಂಡಗಳನ್ನು ವಿಧಿಸಲಾಗುತ್ತದೆ ಎಂದು ಹೇಳಲಾಗಿದೆ.

ಒಂದೇ ದಿನದ 16,000 ಪ್ರಕರಣಗಳು:

ಮಹಾರಾಷ್ಟ್ರದಲ್ಲಿ ಶನಿವಾರ ಒಂದೇ ದಿನ 16,620 ಹೊಸ ಪ್ರಕರಣಗಳು ದಾಖಲಾಗಿವೆ. ಈ ವರ್ಷದಲ್ಲಿ ಇದೇ ಮೊದಲ ಬಾರಿಗೆ ಈ ಪ್ರಮಾಣದಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಭಾರತದ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 2.10 ಕೋಟಿಯನ್ನು ದಾಟಿದ್ದರೆ, ಮಹಾರಾಷ್ಟ್ರದಲ್ಲಿಯೇ 23,14,413 ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ: ಕೊರೊನಾ ಉಲ್ಬಣ: ನಾಗ್ಪುರದಲ್ಲಿ ಮಾರ್ಚ್15 ರಿಂದ 21 ರವರೆಗೆ “ಲಾಕ್‌ಡೌನ್‌” ಜಾರಿ!‌

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights