ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ : ರಾಜಕೀಯ ಪಕ್ಷಗಳಲ್ಲಿ ಶುರುವಾಯ್ತು ಟಿಕೇಟ್ ಟೆನ್ಶನ್!

ರಮೇಶ್ ಜಾರಕಿಹೊಳಿ ಸಿಡಿ ಗದ್ದಲದ ನಡುವೆ ರಾಜ್ಯದ ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ ದಿನಾಂಕ ಘೋಷಣೆಯಾಗಿದ್ದು ಪಕ್ಷಗಳು ಚುನಾವಣೆಗೆ ಭರದ ಸಿದ್ಧತೆ ನಡೆಸಿದ್ದಾರೆ. ಜೊತೆಗೆ ರಾಜಕೀಯ ಪಕ್ಷಗಳಲ್ಲಿ ಟಿಕೇಟ್ ಟೆನ್ಶನ್ ಶುರುವಾಗಿದೆ.

ಬೆಳಗಾವಿ ಲೋಕಸಭೆ ಕ್ಷೇತ್ರ, ರಾಯಚೂರಿನ ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ನಿನ್ನೆಯಿಂದಲೇ ನೀತಿ ಸಂಹಿತೆ ಜಾರಿಯಲ್ಲಿದೆ. ಮೂರು ಕ್ಷೇತ್ರಗಳ ವ್ಯಾಪ್ತಿಯಲ್ಲಿ ನೀತಿ ಸಂಹಿತೆ ಜಾರಿಲ್ಲಿದೆ.

ಸದ್ಯ ಮೂರು ಕ್ಷೇತ್ರಗಳಲ್ಲಿ ಟಿಕೇಟ್ ಟೆನ್ಶನ್ ಶುರುವಾಗಿದೆ. ಬೆಳಗಾವಿಯಲ್ಲಿ ಬಿಜೆಪಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿ ನಿಂತಿದೆ.  ಬಿಜೆಪಿಯಿಂದ ಶೆಟ್ಟರ್ ಸೊಸೆ ಶ್ರದ್ಧಾ, ರಮೇಶ್ ಕತ್ತಿ, ಪ್ರಮೋದ್ ಮೊತಾಲಿಕ್, ಪ್ರಭಾಕರ್ ಕೊರೆ, ಮಹಂತೇಶ ಕವಟಿಗಿಮಠ, ಜಗದೀಶ್ ಶೆಟ್ಟರ್ ಟಿಕೇಟ್ ಆಕಾಂಕ್ಷಿಗಳಾಗಿದ್ದಾರೆ. ಕಾಂಗ್ರೆಸ್ ನಲ್ಲಿ ಸತೀಶ್ ಜಾರಕಿಹೊಳಿ ಲಕ್ಷ್ಮೀ ಹೆಬ್ಬಾಳ್ ಕರ್, ಹೆಬ್ಬಾಳ್ಕರ್ ಸಹೋದರ ಚೆನ್ನರಾಜ್ ಟಿಕೇಟ್ ಆಕಾಂಕ್ಷಿಗಳಾಗಿದ್ದಾರೆ. ಇನ್ನೂ ಮಕಸ್ಕಿ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಬಿಜೆಪಿ ಮಧ್ಯೆ ನೇರಾ ನೇರಾ ಫೈಟ್ ನಡಿಯೋ ಸಾಧ್ಯತೆ ಇದೆ. ಬಿಜೆಪಿಯಿಂದ ಪ್ರಥಾಪ್ ಗೌಡ ಪಾಟೀಲ್ ಗೆ ಟಿಕೇಟ್ ಪಕ್ಕಾ ಆಗಿದೆ ಯಂತೆ. ಕಾಂಗ್ರೆಸ್ ನಿಂದ ಬಸವನಗೌಡ ತಿರವಿಹಾಳಗೆ ಟಿಕೇಟ್ ನೀಡುವ ಸಾಧ್ಯತೆ ಇದೆಯಂತೆ. ಇನ್ನೂ ಬಸವಕಲ್ಯಾಣ ಕ್ಷೇತ್ರದಲ್ಲಿ ಬಿಜೆಪಿಯಿಂದ ಎಂಜಿ ಮೂಳೆ, ಶರಣು ಸಲಾಗಾರ್ ಟಿಕೇಟ್ ಆಕಾಂಕ್ಷಿಗಳಾಗಿದ್ದಾರೆ. ಕಾಂಗ್ರೆಸ್ ನಿಂದ ಮಲ್ಲಮ್ಮ ನಾರಾಯಣ ಗೌಡ ಅವರಿಗೆ ಟಿಕೇಟ್ ಬಹುತೇಕ ಪಕ್ಕಾ ಎಂದು ಹೇಳಲಾಗುತ್ತಿದೆ. ಆದರೆ ಕೊನೆ ಕ್ಷಣದಲ್ಲಿ ಹೈಕಮಾಂಡ್ ಯಾರಿಗೆ ಮಣೆ ಹಾಕುತ್ತೆ ಅನ್ನೋದೇ ಕುತೂಹಲ.

ಮಾರ್ಚ್ 23ಕ್ಕೆ ಅಧಿಸೂಚನೆ ಪ್ರಕಟವಾಗಲಿದ್ದು, ಮಾರ್ಚ್ 30 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಿದೆ. ಇನ್ನೂ ಮಾರ್ಚ್ 31ಕ್ಕೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಏಪ್ರಿಲ್ 3 ನಾಮಪತ್ರ ವಾಪಸ್ ಗೆ ಕೊನೆ ದಿನ ಇರಲಿದೆ. ಏಪ್ರಿಲ್ 17 ರಂದು ಮತದಾನ ನಡೆಯಲಿದ್ದು, ಮೇ 2 ರಂದು ಫಲಿತಾಂಶ ಪ್ರಕಟವಾಗಲಿದೆ.

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ್‌ ಅಂಗಡಿ ನಿಧನದಿಂದಾಗಿ ಬೆಳಗಾವಿ ಲೋಕಸಭಾ ಸ್ಥಾನ ತೆರವಾಗಿತ್ತು. ಸುರೇಶ್‌ ಅಂಗಡಿ ಅವರು ಬೆಳಗಾವಿ ಕ್ಷೇತ್ರದಿಂದ 4 ಬಾರಿ ಆಯ್ಕೆಯಾಗಿದ್ದರು. ಪ್ರತಾಪ್‌ ಗೌಡ ಪಾಟೀಲ್‌ ರಾಜೀನಾಮೆಯಿಂದ ಮಸ್ಕಿ ವಿಧಾನಸಭೆ ಕ್ಷೇತ್ರ ತೆರವಾಗಿತ್ತು. ಪ್ರತಾಪ್‌ಗೌಡ ಪಾಟೀಲ್‌ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು.

ಇದರ ಜತೆಗೆ ಆಂಧ್ರಪ್ರದೇಶದ ಒಂದು ಲೋಕಸಭೆ ಕ್ಷೇತ್ರ ಹಾಗೂ ವಿವಿಧ ರಾಜ್ಯಗಳ 12 ವಿಧಾನಸಭೆ ಕ್ಷೇತ್ರಗಳಿಗೆ ಕೂಡ ಉಪ ಚುನಾವಣೆ ದಿನಾಂಕ ಪ್ರಕಟಿಸಲಾಗಿದೆ. ಒಟ್ಟು 16 ಕ್ಷೇತ್ರಗಳ ಉಪ ಚುನಾವಣೆ ಏಪ್ರಿಲ್ 17ರಂದು ನಡೆಯಲಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights