ಕೊರೊನಾ ಅಟ್ಟಹಾಸಕ್ಕೆ ಬ್ರೇಕ್ ಹಾಕಲು ಕಟ್ಟುನಿಟ್ಟಿನ ನಿಯಮಗಳು ಜಾರಿ…

ಕೊರೊನಾ 2ನೇ ಅಲೆ ಶುರುವಾಗಿದ್ದು ಪ್ರತಿದಿನ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಇಂದು ಪ್ರಧಾನಿ ಮೋದಿ ರಾಜ್ಯಗಳ ಸಿಎಂಗಳ ಜೊತೆ ವೀಡಿಯೋ ಕಾನ್ಫರೆನ್ಸ್ ಸಭೆ ಕೈಗೊಂಡಿದ್ದರು.

ಈ ಸಬೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗಲು ಕಾರಣವನ್ನು ಚರ್ಚಿಸಲಾಗಿದೆ. ಮಹಾಮಾರಿಗೆ ಬ್ರೇಕ್ ಹಾಕಲು ಎಲ್ಲಾ ಸಿಎಂಗಳಿಗೆ ಸಲಹೆ ನೀಡುವಂತೆ ಮೋದಿ ಕೇಳಿದರು.

ಪ್ರಧಾನಿ ನರೇಂದ್ರ ಮೋದಿ 3 ಅಸ್ತ್ರಗಳಿಂದ ಸೋಂಕು ತಡೆಗಟ್ಟಬಹುದು ಎಂದು ಹೇಳಿದ್ದಾರೆ. ಮೈಕ್ರೋ ಕಂಟೆನ್ಮಂಟ್, ಲಸಿಕೆ, ಸಾಮಾಜಿಕ ಅಂತರ, ಮಾಸ್ಕ್, ಸಾನಿಟೈಸರ್ ಅವಶ್ಯಕತೆ ಇದೆ. ಇದರ ಬಗ್ಗೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಜನರು ಕೊರೊನಾ ಬಗ್ಗೆ ನಿರ್ಲಕ್ಷ್ಯ ವಹಿಸದೇ ಇರಲು ಜಿಲ್ಲಾಡಳಿತ ನೋಡಿಕೊಳ್ಳಬೇಕು ಎಂದು ಮೋದಿ ಸೂಚಿಸಿದ್ದಾರೆ.

ಕೊರೊನಾ ಲಸಿಕೆ ಪಡೆದ ನಂತರ ನಾವು ಕೊರೊನಾ ಮುಕ್ತರೆಂದು ಹೇಳಲು ಸಾಧ್ಯವಿಲ್ಲ. ಹೀಗಾಗಿ ಲಸಿಕೆಯೊಂದಿಗೆ ಎಚ್ಚರ ವಹಿಸುವುದು ಮುಖ್ಯವಾಗಿದೆ ಎಂದು ಹೇಳಿದ್ದಾರೆ.

ದೇಶದಲ್ಲಿ ಕೊರೋನಾ ಎರಡನೇ ಅಲೆ ಕಂಡು ಬರುತ್ತಿದೆ. ಭಾರತದಲ್ಲಿ ಶೇ. 96 ಹೆಚ್ಚು ಪ್ರಕರಣಗಳು ಚೇತರಿಸಿಕೊಂಡಿವೆ. ಸಾವಿನ ಪ್ರಮಾಣ ಅತ್ಯಂತ ಕಡಿಮೆ ಇರುವ ದೇಶಗಳಲ್ಲಿ ಭಾರತವು ಸಹ ಒಂದು ಎಂದರು. ಸೋಂಕಿತ ವ್ಯಕ್ತಿಯನ್ನು ಶೀಘ್ರದಲ್ಲಿ ಪತ್ತೆ ಹಚ್ಚಬೇಕು. ಆರ್ ಟಿಪಿಸಿಆರ್ ಶೇ. 70ರಷ್ಟು ಹೆಚ್ಚಿಸಬೇಕು. ನಗರಗಳಿಗೆ ಸೋಂಕು ಹೆಚ್ಚು ವ್ಯಾಪಿಸುತ್ತಿದೆ. ಮೊದಲು ಟಿ1 ನಗರಗಳಲ್ಲಿ ಸೋಂಕು ಹೆಚ್ಚಿತ್ತು. ಹೀಗಾಗಿ ಸಣ್ಣ ಊರುಗಳಲ್ಲಿ ಹೆಚ್ಚು ಮಾಡಬೇಕು. ಟೆಸ್ಟಿಂಗ್ ಹೆಚ್ಚಿಸದಿದ್ದರೆ ಪರಿಸ್ಥಿತಿ ಗಂಭೀರವಾಗಿರುತ್ತದೆ ಎಂದರು.

ಹಾಗಂತ ಲಾಕ್ ಡೌನ್, ಕರ್ಫ್ಯೂ ಜಾರಿಗೊಳಿಸಲಾಗುವುದಿಲ್ಲ . ಜಾರಿಗೊಳಿಸುವಂತಹ ಸ್ಥಿತಿ ಕೂಡ ನಿರ್ಮಾಣವಾಗಬಾರದು. ಈ ಬಗ್ಗೆ ಸಾರ್ವಜನಿಕರು ಎಚ್ಚರ ವಹಿಸಬೇಕು ಎಂದು ಮೋದಿ ತಿಳಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights