ರಸ್ತೆ ಅಪಘಾತದಲ್ಲಿ ಇಬ್ಬರು ಕ್ರೀಡಾಪಟುಗಳು ದಾರುಣ ಸಾವು: ಆರು ಮಂದಿಗೆ ಗಾಯ!

ರಸ್ತೆ ಅಪಘಾತದಲ್ಲಿ ಇಬ್ಬರು ಕ್ರೀಡಾಪಟುಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಲ್ಹಾರ ತಾಲೂಕಿನ ರೋಣಿಗಾಳ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ-218ರಲ್ಲಿ ಸಂಭವಿಸಿದೆ.

ಕ್ರೀಡಾಪಟುಗಳನ್ನು ಸೋಹೆಲ್ (22) ಹಾಗೂ ಮಹಾದೇವ (20) ಮೃತ ದುರ್ದೈವಿಗಳು. ಕಬಡ್ಡಿ ಪ್ರೋ ಲೀಗ್ ಪಂದ್ಯಾವಳಿಯ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಲು ಹುಬ್ಬಳ್ಳಿಗೆ ತೆರಳುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿದೆ. ಒಟ್ಟು ಎಂಟು ಜನ ಪ್ರಯಾಣಿಸುತ್ತಿದ್ದ ಟವೇರಾ ವಾಹನಕ್ಕೆ ಲಾರಿವೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಕ್ರೀಡಾಪಟುಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಡಿಕ್ಕಿ ಹೊಡೆದ ರಬಸಕ್ಕೆ ಘಟನೆಯಲ್ಲಿ ಇನ್ನೂ ಆರು ಕ್ರೀಡಾಪಟುಗಳು ಗಾಯಗೊಂಡಿದ್ದಾರೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕೊಲ್ಹಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights