ದೇಶದಲ್ಲಿ 40,000 ಕೊರೊನಾ ಹೊಸ ಕೇಸ್ – 1.15 ಕೋಟಿ ದಾಟಿದ ಸೋಂಕಿತರ ಸಂಖ್ಯೆ!

ದೇಶದಲ್ಲಿ ಕೊರೊನಾ 2ನೇ ಅಲೆ ಅಟ್ಟಹಾಸ ಮುಂದುವರೆದಿದ್ದು 40,000 ಹೊಸ ಪ್ರಕರಣಗಳು ದಾಖಲಾಗಿದ್ದು ಒಟ್ಟು ಪ್ರಕರಣಗಳ ಸಂಖ್ಯೆ 1.15ಕೋಟಿ ದಾಟಿದೆ.

ಹೌದು.. ದೇಶದಲ್ಲಿ ಕಳೆದ ಒಂದು ವಾರದಿಂದ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಒಂದೇ ದಿನದಲ್ಲಿ ಸುಮಾರು 40,000 ಕೊರೊನಾವೈರಸ್ ಪ್ರಕರಣಗಳು ದಾಖಲಾಗಿದೆ. ಇದೇ ವೇಳೆ ಕೊರೋನಾಗೆ ಕಳೆದ 24 ತಾಸುಗಳ ಅವಧಿಯಲ್ಲಿ 154 ಮಂದಿ ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 1,59,370ಕ್ಕೆ ಏರಿಕೆಯಾಗಿದೆ.

ಕೊರೋನವೈರಸ್‌ಗಾಗಿ ಭಾರತ ಇದುವರೆಗೆ 23 ಕೋಟಿ ಮಾದರಿಗಳನ್ನು ಪರೀಕ್ಷಿಸಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿದೆ.

ಈ ಪೈಕಿ ಗುರುವಾರವೇ 10.57 ಲಕ್ಷ ಮಾದರಿಗಳನ್ನು ಪರೀಕ್ಷಿಸಲಾಯಿತು. ಪಂಜಾಬ್‌ನಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆ, ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಗುರುವಾರ ರಾತ್ರಿಯಿಂದ ಕರ್ಫ್ಯೂ ವಿಧಿಸಲಾಗಿರುವ ಎಂಟು ಜಿಲ್ಲೆಗಳಲ್ಲಿ ರಾತ್ರಿ 11 ರ ಬದಲು ರಾತ್ರಿ 9 ಗಂಟೆಗೆ ಪ್ರಾರಂಭವಾಗಲಿದೆ ಎಂದು ಘೋಷಿಸಿದರು.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights