ಮಹಾರಾಷ್ಟ್ರದ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ : ಐವರು ಸಾವು!
ಮಹಾರಾಷ್ಟ್ರದ ರತ್ನಾಗಿರಿಯಲ್ಲಿ ರಾಸಾಯನಿಕ ಕಾರ್ಖಾನೆಯಲ್ಲಿ ನಡೆದ ಸ್ಫೋಟದಲ್ಲಿ ಐವರು ಸಾವನ್ನಪ್ಪಿದ್ದಾರೆ.
ಮಹಾರಾಷ್ಟ್ರದ ರತ್ನಾಗಿರಿ ಜಿಲ್ಲೆಯ ಕೈಗಾರಿಕಾ ಪ್ರದೇಶದಲ್ಲಿನ ರಾಸಾಯನಿಕ ಕಾರ್ಖಾನೆಯಲ್ಲಿ ಶನಿವಾರ ನಡೆದ ಸ್ಫೋಟದಲ್ಲಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದು ಹಲವಾರು ಮಂದಿ ಗಾಯಗೊಂಡಿದ್ದಾರೆ. ಘರ್ಡಾ ಕೆಮಿಕಲ್ಸ್‌ನಲ್ಲಿ ಶನಿವಾರ ಮುಂಜಾನೆ ಈ ಘಟನೆ ನಡೆದಿದೆ.
ಕಂಪನಿಯೊಳಗೆ ಸಿಲುಕಿಕೊಂಡಿದ್ದ ಸುಮಾರು 40 ರಿಂದ 50 ಜನರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ಗಾಯಾಳುಗಳನ್ನು ಹತ್ತಿರದ ಸಿವಿಲ್ ಆಸ್ಪತ್ರೆಗೆ ಸಾಗಿಸಲಾಗಿದೆ. ತೀವ್ರ ರೋಗಿಗಳನ್ನು ಮುಂಬೈಗೆ ಸ್ಥಳಾಂತರಿಸಲಾಗುತ್ತಿದೆ.
ಬೆಂಕಿಯ ಹಿಂದಿನ ಕಾರಣವನ್ನು ಇನ್ನೂ ಕಂಡುಹಿಡಿದಿಲ್ಲ. ಬಾಯ್ಲರ್ ಸ್ಫೋಟಅಪಘಾತಕ್ಕೆ ಕಾರಣ ಎಂದು ಶಂಕಿಸಲಾಗುತ್ತಿದೆ. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ಕೂಲಿಂಗ್ ಕಾರ್ಯಾಚರಣೆ ನಡೆಯುತ್ತಿದೆ.
ವರದಿಗಳ ಪ್ರಕಾರ, ಎಂಐಡಿಸಿ ಪ್ರದೇಶದಲ್ಲಿ ಇದು ಆರನೇ ಘಟನೆಯಾಗಿದೆ.