ಅಸ್ಸಾಂ ಮೇಲೆ BJP-RSS ದಾಳಿ ಮಾಡುತ್ತಿವೆ; ಸಂಸ್ಕೃತಿಯನ್ನು ಕಾಂಗ್ರೆಸ್‌ ರಕ್ಷಿಸಲಿದೆ: ಕಾಂಗ್ರೆಸ್‌ ಪ್ರಣಾಳಿಕೆ

ಅಸ್ಸಾಂ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ಮುಂದಾಗಿರುವ ಕಾಂಗ್ರೆಸ್‌, ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ರದ್ದುಗೊಳಿಸುವುದು ತಮ್ಮ ಆಧ್ಯತೆ ಎಂದು ಹೇಳಿದ್ದಾರೆ.

ಅಸ್ಸಾಂನ ಸಾಂಸ್ಕೃತಿಕ ಪರಿಕಲ್ಪನೆ, ಸಂಸ್ಕೃತಿಯ ಮೇಲೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ದಾಳಿ ಮಾಡುತ್ತಿವೆ. ಅಂತಹ ದಾಳಿಯಿಂದ ಅಸ್ಸಾಂಅನ್ನು ಕಾಂಗ್ರೆಸ್‌ ರಕ್ಷಿಸಲಿದೆ ಎಂದು ಅವರು ಹೇಳಿದ್ದಾರೆ.

ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಚಿಹ್ನೆ ಇದ್ದರೂ, ಅದು ಜನರ ಪ್ರಣಾಳಿಕೆ. ಇದು ಅಸ್ಸಾಂನ ಜನರ ಆಕಾಂಕ್ಷೆಗಳನ್ನು ಒಳಗೊಂಡಿದೆ” ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಪ್ರತಿ ಗೃಹಿಣಿಗೆ ತಿಂಗಳಿಗೆ 2,000 ರೂ. ನೀಡಲಾಗುವುದು, ಐದು ಲಕ್ಷ ಸರ್ಕಾರಿ ಉದ್ಯೋಗಗಳು ಮತ್ತು ಎಲ್ಲರಿಗೂ ತಿಂಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಭರವಸೆ ನೀಡಿದೆ. ಅಲ್ಲದೆ, ಚಹಾ ತೋಟ ಕಾರ್ಮಿಕರ ಕನಿಷ್ಠ ವೇತನವನ್ನು 365 ರೂ.ಗೆ ಏರಿಸುತ್ತೇವೆ ಎಂದು ಹೇಳಿದೆ.

ಸಂಸ್ಕೃತಿ, ಭಾಷೆ, ಸಂಪ್ರದಾಯ, ಇತಿಹಾಸ ಮತ್ತು ಆಲೋಚನಾ ವಿಧಾನವನ್ನು ಒಳಗೊಂಡಿರುವ ಅಸ್ಸಾಂನ ಕಲ್ಪನೆಯನ್ನು ರಕ್ಷಿಸಲು ಕಾಂಗ್ರೆಸ್ ಅಧಿಕಾರಕ್ಕೆ ಬರುವ ಅಗತ್ಯವಿದೆ ಎಂದು ಗಾಂಧಿ ಹೇಳಿದರು.

“ಇದು ನಮ್ಮ ಬದ್ಧತೆ. ಬಿಜೆಪಿ ಮತ್ತು ಆರ್‌ಎಸ್‌ಎಸ್ ಭಾರತ ಮತ್ತು ಅಸ್ಸಾಂನ ವೈವಿಧ್ಯಮಯ ಸಂಸ್ಕೃತಿಯ ಮೇಲೆ ದಾಳಿ ನಡೆಸುತ್ತಿವೆ ಎಂಬುದು ನಿಮಗೆ ತಿಳಿದಿದೆ. ನಾವು ಅದನ್ನು ರಕ್ಷಿಸುತ್ತೇವೆ” ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಇದನ್ನೂ ಓದಿ: BJP ಅಭ್ಯರ್ಥಿ ಅಣ್ಣಾಮಲೈಗೆ ಶಾಕ್‌; ನಾಮಪತ್ರ ತಡೆಹಿಡಿದ ಚುನಾವಣಾ ಆಯೋಗ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights