BJP ಅಭ್ಯರ್ಥಿ ಅಣ್ಣಾಮಲೈಗೆ ಶಾಕ್‌; ನಾಮಪತ್ರ ತಡೆಹಿಡಿದ ಚುನಾವಣಾ ಆಯೋಗ!

ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದು, ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಐಪಿಎಸ್‌ ಅಧಿಕಾರಿ ಕೆ. ಅಣ್ಣಾಮಲೈ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಡೆಹಿಡಿದಿದೆ.

ತಮಿಳುನಾಡಿನ ಅರವಕುರಚಿ ಕ್ಷೇತ್ರದಿಂದ ಸ್ಪರ್ಥಿಸಿರುವ ಅಣ್ಣಾಮಲೈ, ನಾಮಪತ್ರ ಸಲ್ಲಿಸಿದ್ದರು.

ಆದರೆ, ಅವರ ವಿರುದ್ದ 10ಕ್ಕೂ ಹೆಚ್ಚು ಅಪರಾಧ ಪ್ರಕರಣಗಳು ದಾಖಲಾಗಿವೆ. ಅವರು ತಮ್ಮ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿಲ್ಲ ಎಂದು ಅವರ ಎದುರಾಳಿ ಸ್ಪರ್ಧಿ, ಪಕ್ಷೇತರ ಅಭ್ಯರ್ಥಿ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.

ದೂರು ಪರಶೀಲಿಸಿರುವ ಆಯೋಗ, ಅಣ್ಣಾಮಲೈ ಅವರ ನಾಮಪತ್ರವನ್ನು ತಡೆಹಿಡಿದಿದ್ದು, ದೂರು ಪ್ರಕರಣಗಳ ಬಗ್ಗೆ ಸ್ಪಷ್ಠೀಕರಣ ನೀಡುವುವಂತೆ ಕೇಳಿದೆ ಎಂದು ತಿಳಿದು ಬಂದಿದೆ.

ತಮಿಳುನಾಡು ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿರುವ ಅಣ್ಣಾಮಲೈ ಮಾರ್ಚ್ 18ರಂದು ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಏಪ್ರಿಲ್‌ 03 ರಂದು ತಮಿಳುನಾಡಿನಲ್ಲಿ ಚುನಾವಣೆ ನಡೆಯಲಿದೆ.

ಇದನ್ನೂ ಓದಿ: BSY ಸರ್ಕಾರದ ಭ್ರಷ್ಟಾಚಾರದ ವೈರಸ್‌ಗೆ ಲಸಿಕೆ ಎಲ್ಲಿದೆ: ಸಿದ್ದರಾಮಯ್ಯ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights