ದೇಶದಲ್ಲಿ ಒಂದೇ ದಿನ 43,000ಕ್ಕೂ ಹೆಚ್ಚು ಕೊರೊನಾ ಕೇಸ್ : ಹೆಚ್ಚಿದ ಆತಂಕ!

ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ 2ನೇ ಅಲೆ ವೇಗವಾಗಿ ಹರಡುತ್ತಿದೆ. ಪ್ರತಿನಿತ್ಯ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದ್ದು ಜನರಲ್ಲಿ ಮತ್ತೆ ಮಹಾಮಾರಿಯ ಭಯ ಆರಂಭವಾಗಿದೆ.

ಹೌದು… ದೇಶದಲ್ಲಿ ಕಳೆದ 24 ಗಂಟೆಯಲ್ಲಿ  43,000ಕ್ಕೂ ಹೆಚ್ಚು ಕೊರೊನಾ ಕೇಸ್ ದಾಖಲಾಗಿದ್ದು, ಇದು 2021 ರ ದೈನಂದಿನ ಕೊರೋನವೈರಸ್ ಪ್ರಕರಣಗಳಲ್ಲಿ ಅತಿ ಹೆಚ್ಚು ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ ಒಟ್ಟು 43,846 ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿದ್ದು, 197 ಸಾವುಗಳು ದಾಖಲಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 1,15,99,130 ​​ಕ್ಕೆ ತಲುಪಿದ್ದರೆ, ಸಾವಿನ ಸಂಖ್ಯೆ 1,59,755 ಕ್ಕೆ ಏರಿದೆ.

ಕಳೆದ ನಾಲ್ಕು ದಿನಗಳಲ್ಲಿ ಭಾರತ ದಿನಕ್ಕೆ 40,000 ಕ್ಕೂ ಹೆಚ್ಚು ಕೊರೋನವೈರಸ್ ಪ್ರಕರಣಗಳನ್ನು ವರದಿ ಮಾಡುತ್ತಿದ್ದು, ಅಧಿಕಾರಿಗಳಲ್ಲಿ ಆತಂಕ ಮೂಡಿಸಿದೆ. ಶನಿವಾರ ಭಾರತದಲ್ಲಿ 40,953 ಕೊರೋನವೈರಸ್ ಪ್ರಕರಣಗಳು ವರದಿಯಾಗಿವೆ.

24 ಗಂಟೆಗಳಲ್ಲಿ 22,956 ಜನ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಈ ವರೆಗೆ ಒಟ್ಟು ಡಿಸ್ಚಾರ್ಜ್ ಆದವರ ಸಂಖ್ಯೆ ಈಗ 1,11,30,288 ಆಗಿದ್ದರೆ, ಸಕ್ರಿಯ ಪ್ರಕರಣಗಳ ಸಂಖ್ಯೆ 3,09,087 ಇದೆ.

ಭಾರತ ಇದುವರೆಗೆ ಒಟ್ಟು 4,46,03,841 ಜನರಿಗೆ ಲಸಿಕೆ ನೀಡಲಾಗಿದೆ.

ಮಹಾರಾಷ್ಟ್ರ, ದೆಹಲಿ ಮತ್ತು ಪಂಜಾಬ್ ಸೇರಿದಂತೆ ದೇಶದ ಸುಮಾರು 8 ರಾಜ್ಯಗಳು ಕಳೆದ ವಾರಗಳಲ್ಲಿ ಕೊರೋನವೈರಸ್ ಪ್ರಕರಣಗಳ ಹೆಚ್ಚಾಗುತ್ತಿವೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights