8 ದಿನಗಳವರೆಗೆ ಮೆಜೆಸ್ಟಿಕ್ನಿಂದ ಮೈಸೂರು ರಸ್ತೆ ಕಡೆಗಿನ ಮೆಟ್ರೋ ಮಾರ್ಗ ಸ್ಥಗಿತ!

8 ದಿನಗಳವರೆಗೆ ಮೆಜೆಸ್ಟಿಕ್ನಿಂದ ಮೈಸೂರು ರಸ್ತೆ ಕಡೆಗಿನ ಮೆಟ್ರೋ ಮಾರ್ಗವನ್ನು ಬಿಎಂಆರ್ಸಿಎಲ್ ಸ್ಥಗಿತಗೊಳಿಸಿದೆ.

ಮೈಸೂರು ರಸ್ತೆಯಿಂದ ಕೆಂಗೇರಿಯವರೆಗಿನ ಪೂರ್ವ-ಪಶ್ಚಿಮ ವಿಸ್ತರಿಸಿದ ನೇರಳೆ ಮಾರ್ಗ ಪೂರ್ವ ನಿಯೋಜನೆಗೆ ಸಂಬಂಧಿಸಿದಂತೆ ಮಾಗಡಿ ರಸ್ತೆಯಿಂದ ಮೈಸೂರು ರಸ್ತೆ ಮಾರ್ಗದಲ್ಲಿ ಸಿಗ್ನಲಿಂಗ್ ವ್ಯವಸ್ಥೆಗೆ ಮಾರ್ಪಾಡು ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಆದ್ದರಿಂದ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ಮತ್ತು ಮೈಸೂರು ರಸ್ತೆ ನಡುವೆ ಮೆಟ್ರೋ ರೈಲು ಸೇವೆಗಳನ್ನು ದಿನಾಂಕ 21-3-2021ರಿಂದ 28-3-2021ರವರೆಗೆ (8 ದಿನಗಳವರೆಗೆ) ಸ್ಥಗಿತಗೊಳಿಸಲಾಗಿದೆ.

ಇದರ ಪರಿಣಾಮವಾಗಿ ನೇರಳೆ ಮಾರ್ಗದಲ್ಲಿರುವ ಮೆಟ್ರೋ ಸೇವೆಗಳು ಈ ಅವಧಿಯಲ್ಲಿ ಬೈಯಪ್ಪನಹಳ್ಳಿ ಮತ್ತು ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ನಡುವೆ ಮಾತ್ರ ವಾಣಿಜ್ಯ ಸೇವೆ ಲಭ್ಯವಿರುತ್ತವೆ. ದಿನಾಂಕ 29-3-2021ರ ಬೆಳಿಗ್ಗೆ 7 ಗಂಟೆಯಿಂದ ಎಂದಿನಂತೆ ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲು ಸೇವೆಗಳು ಪುನರಾರಂಭಗೊಳ್ಳುತ್ತವೆ.

ಅದಾಗ್ಯೂ ಹಸಿರು ಮಾರ್ಗದಲ್ಲಿ ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಈ ಮಾರ್ಗದ ಸೇವೆಗಳು ಎಂದಿನಂತೆ ಲಭ್ಯವಿರುತ್ತದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.

ವಿಸ್ತರಣಾ ಮಾರ್ಗದ ಕಾಮಗಾರಿಗಳನ್ನು ತ್ವರಿತವಾಗಿ ಮುಕ್ತಾಯಗೊಳಿಸಲು ಪ್ರಯಾಣಿಕರು ಸಹಕರಿಸುಂವತೆ ವಿನಂತಿಸಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights