ಸಚಿವ ಸಂಪುಟ ಸಭೆಯಲ್ಲಿ ಲಾಕ್ ಡೌನ್ ಬಗ್ಗೆ ಒಲವು ತೊರದ ಸಚಿವರು…!

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲಾಕ್ ಡೌನ್ ಬೇಡವೇ ಬೇಡ ಎಂದು ಅಧಿಕ ಸಚಿವರು ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದಲ್ಲಿ ಕೊರೊನಾ 2ನೇ ಅಲೆ ಅಟ್ಟಹಾಸ ಶುರುವಾಗಿದ್ದು ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ತಾಂತ್ರಿಕ ಸಲಹಾ ತಜ್ಞರು ರಾಜ್ಯದಲ್ಲಿ ಮತ್ತೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಕೆಲವು ನಿಯಮಗಳನ್ನು ಜಾರಿಗೆ ತರುವಂತೆ ಸರ್ಕಾರಕ್ಕೆ ಸಲಹೆ ನೀಡಿತ್ತು. ಈ ಬಗ್ಗೆ ಚರ್ಚಿಸಲು ಇಂದು ಸಚಿವ ಸಂಪುಟ ಸಭೆ ಕರೆಯಲಾಗಿದೆ. ಈ ವೇಳೆ ಅಧಿಕ ಸಂಖೆಯಲ್ಲಿ ಸಚಿವ ರಾಜ್ಯದಲ್ಲಿ ಲಾಕ್ಡೌನ್ ಬೇಡವೇ ಬೇಡ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಲಾಕ್ಡೌನ್ ಬದಲಾಗಿ ಮಹಾರಾಷ್ಟ್ರ, ಕೇರಳ ಗಡಿ ಭಾಗದಿಂದ ಬರುವವರನ್ನು ಪರೀಕ್ಷೆಗೆ ಒಳಪಡಿಸಿ, ಗಡಿ ಭಾಗದಲ್ಲಿ ಬಿಗಿಭದ್ರತೆ ಕೈಗೊಳ್ಳಿ, ಬೇರೆ ಬೇರೆ ನಿಯಮ ತನ್ನಿ ಆದರೆ ಲಾಕ್ ಡೌನ್ , ಆರ್ಥಿಕ ಚಟುವಟಿಕೆಗಳನ್ನು ನಿಲ್ಲಿಸುವುದು ಬೇಡ ಎಂದು ಹೇಳಿದ್ದಾರೆ.

ಈ ಹಿಂದೆ ವಿಧಿಸಲಾಗಿದ್ದ ಲಾಕ್ ಡೌನ್ ನಿಂದ ಜನ ಚೇತರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಎಷ್ಟೂ ಜನ ಕೆಲಸವಿಲ್ಲದೇ ಕುಳಿತಿದ್ದಾರೆ. ಹೀಗಾಗಿ ಸದ್ಯಕ್ಕೆ ಯಾವುದೇ ಲಾಕ್ ಡೌನ್ ಬೇಡ. ಲಾಕ್ಡೌನ್ ಮಾಡಿದರೆ ಜನ ಆರ್ಥಿಕ ಪರಿಸ್ಥಿತಿ ಎದುರಿಸಬೇಕಾಗುತ್ತದೆ. ತುತ್ತು ಅನ್ನಕ್ಕೂ ಪರದಾಡುವಂತ ಸ್ಥಿತಿ ನಿರ್ಮಾಣವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಮಾತ್ರವಲ್ಲದೇ ರಾಜ್ಯದಲ್ಲಿ ಕಟ್ಟುನಿಟ್ಟಿನ ಕೊರೊನಾ ನಿಯಮಗಳನ್ನು ಜಾರಿಗೆ ತನ್ನಿ. ಏಪ್ರಿಲ್ ನಲ್ಲಿ ಅಧಿಕ ಶುಭ ಸಮಾರಂಭಗಳು ನಡೆಯುತ್ತವೆ. ಇವುಗಳಿಗೆ ನಿಯಮ ಜಾರಿಗೆ ತನ್ನಿ. ಈಗಾಗಲೇ ಮದುವೆ ಸಮಾರಂಭಗಳಲ್ಲಿ 200ಕ್ಕೂ ಹೆಚ್ಚು ಜನರು ಭಾಗವಹಿಸಬಾರದು ಎನ್ನುವ ನಿಯಮವನ್ನು, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೇ ಇದ್ದರೆ 250 ದಂಡವನ್ನು ಕಟ್ಟುನಿಟ್ಟುಗೊಳಿಸಿ. ಸಾಮಾಜಿಕ ಅಂತರ ಕಾಪಾಡಲು ಜನರಲ್ಲಿ ಜಾಗೃತಿ ಮುಟ್ಟಿಸಿ ಎಂದು ಸಲಹೆ ನೀಡಿದ್ದಾರೆ.

ಈ ವೇಳೆ ಮಾತನಾಡಿದ ವಿಧಾನಸೌಧದಲ್ಲಿ ಮಾತನಾಡಿದ ಕೃಷಿ ಸಚಿವ ಬಿಸಿ ಪಾಟೀಲ್, ” ಒಂದು ವಾರ ಜನರಿಗೆ ಕಾಲಾವಕಾಶ ಕೊಡುತ್ತೇವೆ. ಜನ ತಮ್ಮನ್ನ ತಾವು ರಕ್ಷಣೆ ಮಾಡಿಕೊಳ್ಳಬೇಕು. ಒಂದು ವೇಳೆ ಕೊರೊನಾ ನಿಯಂತ್ರಣಕ್ಕೆ ಬಾರದೇ ಹೋದರೆ ಮುಂದೆ ಸರ್ಕಾರ ನಿರ್ಧಾರ ಕೈಗೊಳಗ್ಳುತ್ತದೆ” ಎಂದಿದ್ದಾರೆ.

 

 

 

 

Spread the love

Leave a Reply

Your email address will not be published. Required fields are marked *