ಬ್ಯಾಂಕ್‌ಗಳನ್ನು ನಿರ್ವಹಸಲಾಗದೆ ಖಾಸಗೀಕರಣ ಮಾಡುತ್ತಿದ್ದೇವೆ: ನಿರ್ಮಲಾ ಸೀತಾರಾಮನ್‌ ರಾಜೀನಾಮೆಗೆ ಒತ್ತಾಯ!

ಸರ್ಕಾರಿ ಸ್ವಾಮ್ಯದಲ್ಲಿರುವ ಬ್ಯಾಂಕುಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಅವುಗಳನ್ನು ಖಾಸಗೀಕರಣಗೊಳಿಸುತ್ತಿದ್ದೇವೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿಕೆ ನೀಡಿದ್ದಾರೆ. ಇದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಅವರು ರಾಜೀನಾಮೆ ನೀಡಬೇಕೆಂದು ನೆಟ್ಟಿಗರು ಆಗ್ರಹಿಸಿದ್ದಾರೆ.

“ಬ್ಯಾಂಕ್ ಖಾಸಗೀಕರಣದ ಬಗ್ಗೆ ಅಸಮಾಧಾನ ಹೊಂದಿರುವವರ ಜತೆ ಮಾತನಾಡಲು ನಾನು ಇಚ್ಛಿಸುತ್ತೇನೆ. ಆರ್ಥಿಕ ಚಟುವಟಿಕೆಗಳು ಪುನರುಜ್ಜೀವನಗೊಳ್ಳಬೇಕು. ನನಗೆ ಅವುಗಳನ್ನು ಸಮರ್ಥವಾಗಿ ನಿಭಾಯಿಸಲು ಸಾಧ್ಯವಾಗುತ್ತಿಲ್ಲವಾದದುದರಿಂಧ ಅವುಗಳು ಉದ್ಯಮದಲ್ಲಿ ಉಳಿಯುವಂತೆ ಮಾಡಲು ನಾವು ಮಾರಾಟ ಮಾರಾಟ ಮಾಡುತ್ತಿದ್ದೇವೆ” ಎಂದು ಇಕನಾಮಿಕ್ ಟೈಮ್ಸ್ ಆಯೋಜಿಸಿದ್ದ ಸಮಾರಂಭವೊಂದರಲ್ಲಿ ನಿರ್ಮಲಾ ಸೀತಾರಾಮನ್ ಹೇಳಿದ್ದರು.

ಹಣಕಾಸು ಸಚಿವೆಯ ಇಂತಹ ಬೇಜಬ್ದಾರಿ ಹೇಳಿಕೆಯ ವಿರುದ್ದ ನೆಟ್ಟಿಗರು ಕಿಡಿಕಾರಿದ್ದಾರೆ. ಅವರು ಬ್ಯಾಂಕುಗಳನ್ನು ನಿರ್ವಹಿಸಲು ಅಸಮರ್ಥರಾಗಿದ್ದಾರೆ. ಹಾಗಾಗಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ಕೊಟ್ಟು ಕೆಳಗಿಳಿಯಬೇಕು ಎಂದು ಆಗ್ರಹಿಸಿದ್ದಾರೆ.

“ನಿಮಗೆ ಬ್ಯಾಂಕುಗಳನ್ನು ಸಮರ್ಥವಾಗಿ ನಿಭಾಯಿಸಲು ಸಾಧ್ಯವಿಲ್ಲದೇ ಇದ್ದರೆ ದೇಶದ ಅರ್ಥವ್ಯವಸ್ಥೆಯನ್ನು ಹೇಗೆ ನಿಭಾಯಿಸುತ್ತೀರಿ, ಎಲ್ಲವನ್ನೂ ಗೋಜಲುಗೊಳಿಸುವ ಬದಲು ರಾಜೀನಾಮೆ ನೀಡಿ” ಎಂದು ಒಬ್ಬರು ಬರೆದಿದ್ದರೆ ಇನ್ನೊಬ್ಬರು ಪ್ರತಿಕ್ರಿಯಿಸಿ “ನಿಮಗೆ ಸರಿಯಾಗಿ ನಿಭಾಯಿಸಲು ಸಾಧ್ಯವಿಲ್ಲವೆಂದಾದರೆ ಅದು ನಿಮ್ಮ ಸಾಮರ್ಥ್ಯದ ಕುರಿತು ಪ್ರಶ್ನೆಗಳನ್ನೆತ್ತುತ್ತದೆ. ನಿಮಗೆ ವಿತ್ತ ಸಚಿವೆಯಾಗಿ ಮುಂದುವರಿಯುವ ಹಕ್ಕಿಲ್ಲ, ಭಾರತಕ್ಕೆ ಒಬ್ಬ ಸಮರ್ಥ ವಿತ್ತ ಸಚಿವರು ಬೇಕು” ಎಂದು ಬರೆದಿದ್ದಾರೆ.

“ನಿಮಗೆ ಬ್ಯಾಂಕುಗಳನ್ನು ಸರಿಯಾಗಿ ನಿರ್ವಹಿಸಲು ಸಾಧ್ಯವಿಲ್ಲದೇ ಇದ್ದರೆ ದಯವಿಟ್ಟು ರಾಜೀನಾಮೆ ನೀಡಿ” ಎಂದು ಇನ್ನು ಕೆಲವರು ಪ್ರತಿಕ್ರಿಯಿಸಿದ್ದಾರೆ.

Read Also: ಗೋವಾ ಚುನಾವಣೆ: ರಾಜಧಾನಿ ಹಾಗೂ 06 ಪುರಸಭೆಗಳ ಅಧಿಕಾರ BJP ವಶಕ್ಕೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights