ಎರಡು ಲಾರಿಗಳ ಮಧ್ಯೆ ಬುಲೆರೋ ಸಿಕ್ಕಿ ಭೀಕರ ಅಪಘಾತ; ಮಹಿಳೆ ಸಾವು!

ಎರಡು ಲಾರಿಗಳ ಮಧ್ಯೆ ಬುಲೆರೋ ಕಾರು ಸಿಕ್ಕಿಕೊಂಡ ಭೀಕರ ಅಪಘಾತ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕು ಅರಬೈಲ್ ಘಟ್ಟದಲ್ಲಿ ಸಂಭವಿಸಿದ್ದು, ಘಟನೆಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.

ಮಂಗಳವಾರ ಬಾಗಲಕೋಟೆಯಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಬುಲೆರೋ ವಾಹನಕ್ಕೆ ಎಡ ಬದಿಯಿಂದ ಒಂದು ಲಾರಿ, ಬಲದಿಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದ್ದು, ಎರಡೂ ಲಾರಿಗಳ ಮಧ್ಯೆ ಸಿಕ್ಕ ಬುಲೆರೋ ನಜ್ಜುಗುಜ್ಜಾಗಿದೆ.

ಬಾಗಲಕೋಟೆಯ ಲೋಕಾಪುರದ 8 ಜನರು ಬುಲೆರೋದಲ್ಲಿ ಗೋಕರ್ಣಕ್ಕೆ ಹೋಗುತ್ತಿದ್ದರು. ಈ ಪೈಕಿ ನಾಲ್ವರು ಮಹಿಳೆಯರು, ಇಬ್ಬರು ಪುರುಷರು ಹಾಗೂ ಇಬ್ಬರು ಮಕ್ಕಳು ಪ್ರಯಾಣಿಸುತ್ತಿದ್ದರು.

ಈ ವೇಳೆ ಯಲ್ಲಾಪುರದ ಅರಬೈಲ್‌ ಘಟ್ಟದ ಬಳಿ ಬುಲೆರೋಗೆ ಹಿಂದಿನಿಂದ ಬಂದ ಲಾರಿ ಡಿಕ್ಕಿಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಎದುರಿನಿಂದ ಬರುತ್ತಿದ್ದ ಟಿಪ್ಪರ್​ಗೂ ಬುಲೆರೋ ಡಿಕ್ಕಿಹೊಡೆದುಕೊಂಡಿದೆ.

ಭೀಕರ ಅಪಘಾತದಲ್ಲಿ ಒಬ್ಬ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಮಹಿಳೆಯರ ಸ್ಥಿತಿ ಗಂಭೀರವಾಗಿದೆ. ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಸತೀಶ್ ಜಾರಕಿಹೊಳಿ ಮೂಲೆಗುಂಪು ಮಾಡಲು ಕಾಂಗ್ರೆಸ್‌ನಲ್ಲಿ ಸಂಚು?: ಬೆಂಬಲಿಗರ ಆಕ್ರೋಶ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights