ಚೆಕ್‌ಪೋಸ್ಟ್‌ನಲ್ಲಿ ಪೊಲೀಸರ ಮೇಲೆ ಗುಂಡಿನ ದಾಳಿ: ಮೂವರ ಬಂಧನ

ಚೆಕ್‌ಪೋಸ್ಟ್‌ ಬಳಿ ಕಾರು ತಪಾಸಣೆ ಮಾಡುವ ವೇಳೆ ಕಾರಿನಲ್ಲಿದ್ದ ದುಷ್ಕರ್ಮಿಗಳು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಕೇರಳ-ಕರ್ನಾಟಕ ಗಡಿಯಲ್ಲಿರುವ ವಿಟ್ಲ ಸಾಲೆತ್ತೂರು ಬಳಿಯ ಕೊಡಂಗೆ ಚೆಕ್‌ಪೋಸ್ಟ್‌ನಲ್ಲಿ ನಡೆದಿದೆ.

ಶುಕ್ರವಾರ ಮುಂಜಾನೆ ಕೇರಳದಿಂದ ಕಣ್ತಪ್ಪಿಸಿ ಕರ್ನಾಟಕಕ್ಕೆ ಪರಾರಿಯಾಗುತ್ತಿದ್ದ ಕಾರನ್ನು ಚೆಕ್‌ಪೋಸ್ಟ್‌ನಲ್ಲಿ ಪೊಲೀಸರು ತಡೆದು ತಪಾಸಣೆ ನಡೆಸಲು ಮುಂದಾಗಿದ್ದಾರೆ. ಈ ವೇಳೆ ಕಾಲಿನಲ್ಲಿದ್ದ ದುಷ್ಕರ್ಮಿಗಳು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ವಿಟ್ಲ ಪೊಲೀಸ್‌ ಠಾಣೆಯ ಎಸ್‌ಐ ವಿನೋದ್‌ ರೆಡ್ಡಿ ಅವರಿಗೆ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅದಕ್ಕೂ ಮುನ್ನ ಕೇರಳದಲ್ಲಿ ದುಷ್ಕರ್ಮಿಗಳ ತಂಡ ಗುಂಡಿನ ದಾಳಿ ನಡೆಸಿ ಪರಾರಿಯಾಗುತ್ತಿತ್ತು. ದುಷ್ಕರ್ಮಿಗಳು ವಿಟ್ಲ ಮೂಲಕ ಹಾದುಹೋಗುತ್ತಿರುವ ಖಚಿತ ಮಾಹಿತಿ ಮೇಲೆ ಕೊಡಂಗೆ ಚೆಕ್‌ಪೋಸ್ಟ್‌ನಲ್ಲಿ ಅವರನ್ನು ತಡೆಯಲು ಪೊಲೀಸರು ಮುಂದಾಗಿದ್ದರು. ಈ ವೇಳೆ ದುಷ್ಕರ್ಮಿಗಳು ಪೊಲೀಸರ ಮೇಲೂ ಗುಂಡಿನ ದಾಳಿ ನಡೆಸಿದ್ದಾರೆ.

ಆದರೂ, ತಮ್ಮ ಕಾರ್ಯಾಚರಣೆಯಿಂದ ಹಿಂದೆ ಸರಿಯದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಮೀಯಪದವು ಸಾಕೀರ್ ಯಾನೆ ಮಹಮ್ಮದ್ ವಾಕೀರ್ (26), ಬಂದಿಯೂರು ಅಬ್ದುಲ್ ಲತೀಫ್ ಯಾನ್ ಲತ್ತಿ ಯಾನೆ ಲತೀಫ್ (23), ಅಡ್ಕತ್ತಗುರಿ ಅಸಫ್ಕ್ (25) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಮಹಾರಾಷ್ಟ್ರ ಮೈತ್ರಿ ಸರ್ಕಾರ ಬಿಕ್ಕಟ್ಟು: ಸೋನಿಯಾಗಾಂಧಿ ಅವರನ್ನು ಭೇಟಿಯಾದ NCP ನಾಯಕಿ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights