ಅಸ್ಸಾಂನಲ್ಲಿ ತ್ರಿಕೋನ ಸ್ಪರ್ಧೆ: ಮೊದಲ ಹಂತದ 47 ಕ್ಷೇತ್ರಗಳ ಚುನಾವಣಾ ಕಣದಲ್ಲಿ 264 ಅಭ್ಯರ್ಥಿಗಳು!

ಪಂಚರಾಜ್ಯಗಳ ಚುನಾವಣೆ ಇಂದಿನಿಂದ ಆರಂಭವಾಗುತ್ತಿದೆ. ಶನಿವಾರ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಮೊದಲ ಹಂತದ ಚುನಾವಣೆ ನಡೆಯುತ್ತಿದೆ. ಅಸ್ಸಾಂನಲ್ಲಿ ತ್ರಿಕೋನ ಸ್ಪರ್ಧೆ ಇದ್ದು, ಒಟ್ಟು 126 ಸ್ಥಾನಗಳ ಪೈಕಿ 47 ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದೆ.

ಶನಿವಾರ ಮತದಾನ ನಡೆಯುತ್ತಿರುವ 47 ಸ್ಥಾನಗಳಿಗಾಗಿ 264 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಈ ಪೈಕಿ 23 ಮಹಿಳಾ ಅಭ್ಯರ್ಥಿಗಳಿದ್ದಾರೆ. ಅಖಾಡದಲ್ಲಿ ಆಡಳಿತಾರೂಢ ಬಿಜೆಪಿ-ಎಜಿಪಿ ಮೈತ್ರಿಕೂಟ, ಕಾಂಗ್ರೆಸ್‌ ನೇತೃತ್ವದ ವಿರೋಧ ಪಕ್ಷಗಳ ಮೈತ್ರಿಕೂಟ ಹಾಗೂ ಹೊಸದಾಗಿ ರಚನೆಯಾದ ಅಸ್ಸಾಂ ಜತಿಯಾ ಪರಿಷತ್‌ (ಎಜೆಪಿ) ನಡುವೆ ಸೆಣೆಸಾಟ ನಡೆಯುತ್ತಿದೆ.

ಈ ಪೈಕಿ, ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟದಲ್ಲಿ ಬಿಜೆಪಿ 39 ಹಾಗೂ ಎಜಿಪಿ 10 ಸ್ಥಾನಗಳಲ್ಲಿ ಸ್ಪರ್ಧಿಸಿವೆ. ಅಂತೆಯೇ 43 ಸ್ಥಾನಗಳಲ್ಲಿ ಕಾಂಗ್ರೆಸ್‌ ಸ್ಪರ್ಧಿಸಿದ್ದು, ಎಐಯುಡಿಎಫ್‌, ಸಿಪಿಐ (ಎಂಎಲ್‌-ಎಲ್‌), ಆರ್‌ಜೆಡಿಎ ಮತ್ತು ಅಂಚಾಲಿಕ್‌ ಗಣ ಮೋರ್ಚಾ ತಲಾ ಒಂದು ಸ್ಥಾನಗಳಲ್ಲಿ ಸ್ಪರ್ಧಿಸಿವೆ. ಎಜೆಪಿ 41 ಸ್ಥಾನಗಳಲ್ಲಿ ಸ್ಪರ್ಧಿಸಿದೆ.

ಅಸ್ಸಾಂ ಮುಖ್ಯಮಂತ್ರಿ ಸರ್ವಾನಂದ ಸೋನೊವಾಲ್‌ ಮುಜುಲಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಈ ಬಾರಿಯೂ ತಾವೇ ಸಿಎಂ ಆಗುತ್ತೇನೆ ಎಂಬ ಭರವಸೆಯಲ್ಲಿ ಅವರಿದ್ದಾರೆ. ಆದರೆ, ಬಿಜೆಪಿ ಮುಂದಿನ ಸಿಎಂ ಅಭ್ಯರ್ಥಿ ಯಾರು ಎಂಬುದನ್ನು ಪ್ರಕಟಿಸಿಲ್ಲ.

126 ಸದಸ್ಯರನ್ನು ಒಳಗೊಂಡ ಅಸ್ಸಾಂ ವಿಧಾನಸಭೆಗೆ ಮೂರು ಹಂತಗಳಲ್ಲಿ ಚುನಾವಣೆ ನಡೆಯುತ್ತಿದೆ. ಮೇ 2ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ: ಗುಜರಾತ್‌ನಲ್ಲಿ ಪತ್ರಿಕಾಗೋಷ್ಟಿ ನಡೆಸುತ್ತಿರುವಾಗಲೇ ರೈತ ನಾಯಕ ಯುದ್ಧವೀರ್‌ ಸಿಂಗ್‌ ಬಂಧನ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights