ವಿಜಯಪುರ: ಹೊಲಕ್ಕೆ ಹೋದವನನ್ನು ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು!
ತನ್ನ ಜಮೀನಿಗೆ ತೆರಳಿದ್ದ ಯುವಕನೊಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡಿದಿದೆ.
ಜಿಲ್ಲೆಯ ಇಂಡಿ ತಾಲೂಕಿನ ಲಾಳಸಂಗಿ ಗ್ರಾಮದ 22 ವರ್ಷದ ಯುವಕ ಸಿದ್ಧಾರೂಢ ಮರಾಠಿ ಎಂಬಾತನನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಿದ್ದಾರೂಢ ಹೊಲಕ್ಕೆ ಹೋಗಿಬರುವುದಾಗಿ ಹೇಳಿಹೋಗಿದ್ದ ಎಂದು ಆತನ ಕುಟುಂಬದವರು ತಿಳಿಸಿದ್ದಾರೆ. ಆದರೆ ಅಲ್ಲಿಯೇ ಈತ ಕೊಲೆಗೀಡಾಗಿದ್ದಾನೆ. ಮೈತುಂಬಾ ಕೊಡಲಿ ಏಟುಗಳು ಬಿದ್ದಿದ್ದು, ಬರ್ಬರವಾಗಿ ಕೊಲೆ ಮಾಡಲಾಗಿದೆ. ಆದರೆ ಕೊಲೆಗೆ ಕಾರಣವೇನು ಎಂಬುದು ತಿಳಿಸಿದಿಲ್ಲ.
ಘಟನೆ ನಡೆದಿರುವ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಶ್ವಾನದಳದಿಂದ ಪರಿಶೀಲನೆ ನಡೆಸಲಾಗಿದೆ. ಸ್ಥಳಕ್ಕೆ ಎಎಸ್ಪಿ ರಾಮ ಅರಸಿದ್ಧಿ, ಡಿವೈಎಸ್ಪಿ ಶ್ರೀಧರ ದೊಡ್ಡಿ ಭೇಟಿ ಪರಿಶೀಲಿಸಿದ್ದಾರೆ. ಇಂಡಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Read Also: Bigg Boss :’ಮಂಜುದು ಈಗ ಏನೂ ನಡೆಯುತ್ತಿಲ್ಲ, ನೀನೇ ಸೆಂಟ್ರಾಫ್ ಅಟ್ರ್ಯಾಕ್ಷನ್ ಆಗಬೇಕು’

