1 ರಿಂದ 9ನೇ ತರಗತಿವರೆಗೆ ಪರೀಕ್ಷೆ ರದ್ದು? ಸಿಎಂ ಜೊತೆ ಚರ್ಚಿಸಿ ನಿರ್ಧಾರ: ಸಚಿವ ಸುಧಾರಕ್‌

ದೇಶಾದ್ಯಂತ ಕೊರೊನಾ ಪ್ರಕರಣಗಳ ಸೋಂಕು ಮತ್ತೆ ಏರಿಕೆಯಾಗುತ್ತಿವೆ. ಕರ್ನಾಟಕಕ್ಕೂ ಇದರ ಬಿಸಿ ತಟ್ಟಿದೆ. ಈ ಹಿನ್ನೆಲೆಯಲ್ಲಿ ಈ ವರ್ಷ 1 ರಿಂದ 9ನೇ ತರಗತಿವರೆಗೆ ಪರೀಕ್ಷೆಗಳನ್ನು ರದ್ದು ಮಾಡುವ ಬಗ್ಗೆ ಮುಖ್ಯಮಂತ್ರಿ ಬಿಎಸ್‌ವೈ ಜೊತೆ ಚರ್ಚಿಸಿ ನಿರ್ಧಾರ ಮಾಡುತ್ತೇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಕಳೆದ ವರ್ಷದಂತೆ ಈ ಬಾರಿಯೂ 1 ರಿಂದ 9ನೇ ತರಗತಿಯ ವರೆಗೆ ಪರೀಕ್ಷೆ ರದ್ದಾಗುವ ಸಾಧ್ಯತೆ ಇದ್ದು, ವಿದ್ಯಾರ್ಥಿಗಳು ಪರೀಕ್ಷೆ ರದ್ದಾಗುವ ನಿರೀಕ್ಷೆಯಲ್ಲಿದ್ದಾರೆ.

ಕೊರೊನಾ ಸೋಂಕು ಕಳೆದ ಎರಡು ವಾರದಿಂದ ರಾಜ್ಯದಲ್ಲಿ ಮತ್ತೆ ನಿಧಾನವಾಗಿ ಏರುಗತಿಯತ್ತ ಸಾಗಿದೆ. ಇನ್ನು ಎರಡು ತಿಂಗಳ ಕಾಲ ಸೋಂಕಿನ ಪ್ರಮಾಣ ಹೆಚ್ಚಾಗುವ ಸಂಭವವಿದೆ ಎಂದು ತಜ್ಞರು ತಿಳಿಸಿರುವುದಾಗಿ ಸುಧಾಕರ್ ಹೇಳಿದ್ದಾರೆ.

1 ರಿಂದ 9ನೇ ತರಗತಿವರೆಗೆ ಪರೀಕ್ಷೆಗಳನ್ನು ನಡೆಸದೆ ಕಳೆದ ಬಾರಿಯಂತೆ ವಿದ್ಯಾರ್ಥಿಗಳನ್ನು ಉತ್ತೀರ್ಣ ಮಾಡುವ ಬಗ್ಗೆ ಸಿಎಂ ಹಾಗೂ ಸಂಬಂಧಪಟ್ಟ ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳ ಜೊತೆ ಚರ್ಚೆ ಮಾಡಲಾಗುವುದು. ಅಂತಿಮವಾಗಿ ಮುಖ್ಯಮಂತ್ರಿಗಳೇ ಈ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಒಂದು ಕಡೆ ಕುಳಿತು ಪರೀಕ್ಷೆ ಬರೆಯುವುದರಿಂದ ಸೋಂಕು ಹೆಚ್ಚಾಗುವ ಸಾಧ್ಯತೆಯಿದೆ. ಇದನ್ನು ತಡೆಗಟ್ಟಲು ಕೆಲವು ಅನಿವಾರ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನಿಮ್ಮ ಸುಳ್ಳಗಳ ಅಗತ್ಯವಿಲ್ಲ; ಗೋ ಬ್ಯಾಕ್‌ ಸೂಲಿಬೆಲೆ: ಶಿವಮೊಗ್ಗದಲ್ಲಿ ಯುವಜನರ ಪ್ರತಿಭಟನೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights