ಗೋಕಾಕ್ ನಲ್ಲಿ ರಮೇಶ್ ಜಾರಕಿಹೊಳಿ ಬೆಂಬಲಿಗರಿಂದ ಡಿಕೆಶಿ ವಿರುದ್ಧ ಪ್ರತಿಭಟನೆ!

ಸಿಡಿ ಯುವತಿಯನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಕೈಗೊಂಬೆಯಾಗಿ ಬಳಸಿಕೊಳ್ಳುತ್ತಿದ್ದಾರೆಂದು ಯುವತಿಯ ಪೋಷಕರು ಆರೋಪಿಸುತ್ತಿದ್ದಂತೆ ಇತ್ತ ಬೆಳಗಾವಿ ಗೋಕಾಕ್ ನಲ್ಲಿ ಇಂದು ರಮೇಶ್ ಜಾರಕಿಹೊಳಿ ಬೆಂಬಲಿಗರು ಡಿಕೆ ಶಿವಕುಮಾರ್ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ.

ನಿನ್ನೆ ಯುವತಿ ಪೋಷಕರು ಡಿಕೆ ಶಿವಕುಮಾರ್ ಅವರು ರಾಜಕೀಯವಾಗಿ ಬಳಸಿಕೊಂಡುತ್ತಿದ್ದಾರೆಂದು ಆರೋಪಿಸಿದ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಸಿಡಿದೆದ್ದಿದ್ದಾರೆ. ಹೀಗಾಗಿ ಅವರ ವಿರುದ್ಧ ಘೋಷಣೆ ಕೂಗುತ್ತಾ, ಅಣುಕು ಶವ ಮಾಡಿ ಪ್ರತಿಭಟನೆ ಮಾಡುತ್ತಿದ್ದಾರೆ.

ಟಥರ್ ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕುತ್ತಿದ್ದಾರೆ. ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಗುಂಪುಗಳನ್ನು ಚದುರಿಸಲು ಪೊಲೀಸರು ಪ್ರತ್ನಿಸುತ್ತಿದ್ದತ್ತೆ ಪೊಲೀಸ್ ಹಾಗೂ ಬೆಂಬಲಿಗರ ನಡುವೆ ವಾಗ್ವಾದ ನಡೆದಿದೆ. ಪ್ರತಿಭಟನೆ ಅಡ್ಡಪಡಿಸಿದ್ದಕ್ಕೆ ಪೊಲೀಸ್ ಹಾಗೂ ಬೆಂಬಲಿಗರ ನಡುವೆ ವಾಗ್ವಾದ ನಡೆದಿದೆ. ಹೀಗಾಗಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights