ಯಡಿಯೂರಪ್ಪಗೆ ಎದುರಾಯ್ತು ಸಂಕಷ್ಟ: ಸಿಎಂ ಬಿಎಸ್‌ವೈ ವಿರುದ್ಧ ತನಿಖೆಗೆ ಹೈಕೋರ್ಟ್‌ ಆದೇಶ!

ಮೈತ್ರಿ ಸರ್ಕಾರ ಉರುಳಿಸಲು ಆಪರೇಷನ್‌ ಕಮಲ ನಡೆಸಿ, ಜೆಡಿಎಸ್‌ ಶಾಸಕರಿಗೆ ಆಮಿಷ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ವಿರುದ್ದ ತನಿಖೆ ನಡೆಸಲು ಕರ್ನಾಟಕ ಹೈಕೋರ್ಟ್ ಸಮ್ಮನಿ ನೀಡಿದೆ.

ಜೆಡಿಎಸ್ ಶಾಸಕರನ್ನು ಬಿಜೆಪಿಗೆ ಸೆಳೆಯಲು ಆಮಿಷವೊಡ್ಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಬಿಎಸ್‌ವೈ, ಶಿವನಗೌಡ ನಾಯಕ್, ಪ್ರೀತಂ ಗೌಡ ಹಾಗೂ ಎಂ.ಬಿ. ಮರಮಕಲ್ ಅವರ ವಿರುದ್ಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

ಈ ಎಫ್‌ಐಆರ್‌ಅನ್ನು ರದ್ದು ಮಾಡುವಂತೆ ಕೋರಿ ಯಡಿಯೂರಪ್ಪ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಅವರ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್‌ ಈ ಹಿಂದೆ ತಡೆ ನೀಡಿತ್ತು.

ಇದೀಗ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರಿದ್ದ ಪೀಠ ಪ್ರಕರಣಕ್ಕೆ ಸಂಬಂಧಿಸದಂತೆ ವಿಚಾರಣೆ ನಡೆಸಿದ್ದು, ಈ ಹಿಂದೆ ಎಫ್‌ಐಆರ್‌ಗೆ ನೀಡಿದ್ದ ತಡೆಯಾಜ್ಞೆಯನ್ನು ರದ್ದು ಮಾಡಿದೆ. ಅಲ್ಲದೆ, ಯಡಿಯೂರಪ್ಪ ವಿರುದ್ಧ ತನಿಖೆ ನಡೆಸಲು ಅವಕಾಶ ನೀಡಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಬಸವಕಲ್ಯಾಣದಲ್ಲಿ JDS ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಲು BJPಯಿಂದ ಹಣ ಪಡೆದ ಆರೋಪ: ಹೆಚ್‌ಡಿಕೆ ಸರಣಿ ಪ್ರಶ್ನೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights