ಮೈಸೂರಿನಲ್ಲಿ ಸಿದ್ದರಾಮಯ್ಯಗೆ ಮತ್ತೊಮ್ಮೆ ಮುಖಭಂಗ; ಸರಗೂರಿನಲ್ಲಿ ಕಾಂಗ್ರೆಸ್ ಸೋಲು!
ಮೈಸೂರು ಮೇಯರ್ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರ ಮಾತನ್ನೂ ಮೀರಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದವು. ಇದೀಗ ಸರಗೂರು ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲನುಭವಿಸಿದೆ. ಹೀಗಾಗಿ ಸಿದ್ದರಾಮಯ್ಯ ಅವರಿಗೆ ಮತ್ತೊಮ್ಮೆ ಮುಖಭಂಗವಾಗಿದೆ.
ಸರಗೂರು ಪಟ್ಟಣ ಪಂಚಾಯತಿಯ 12 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 06 ಸ್ಥಾನಗಳನ್ನು ಗೆದ್ದದೆ. ಜೆಡಿಎಸ್ ಮೂರು, ಕಾಂಗ್ರೆಸ್ ಎರಡು ಮತ್ತು ಒಬ್ಬ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.
06 ಸ್ಥಾನಗಳನ್ನು ಗೆದ್ದರುವ ಬಿಜೆಪಿ, ಪಕ್ಷೇತ್ರರ ಸದಸ್ಯ ಅಥವಾ ಜೆಡಿಎಸ್ ಬೆಂಬಲ ಪಡೆದು ಅಧಿಕಾರದ ಗದ್ದುಗೆಯನ್ನು ವಶಪಡಿಸಿಕೊಳ್ಲುವುದು ಖಚಿತವಾಗಿದೆ.
ಸರಗೂರು ಪಂಚಾಯತಿಯು ಎಚ್ಡಿ ಕೋಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿದ್ದು, ಈ ಕ್ಷೇತ್ರವನ್ನು ಕಾಂಗ್ರೆಸ್ ಶಾಸಕ ಅನಿಲ್ ಚಿಕ್ಕಮಾದು ಅವರು ಪ್ರತಿನಿಧಿಸುತ್ತಿದ್ದಾರೆ.
ಇದನ್ನೂ ಓದಿ: ಯಡಿಯೂರಪ್ಪರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸಿ: ರಾಜ್ಯಪಾಲರಿಗೆ ಸಿದ್ದರಾಮಯ್ಯ ಒತ್ತಾಯ