ದೇಶದಲ್ಲಿಂದು ಸೆಪ್ಟೆಂಬರ್ ನಂತರ ಅತಿಹೆಚ್ಚು ಕೊರೊನಾ ಪ್ರಕರಣಗಳು ದಾಖಲು!

ದೇಶದಲ್ಲಿಂದು ದಿನದಿಂದ ದಿನಕ್ಕೆ ಕೊರೊನಾ 2ನೇ ಅಲೆ ಅರ್ಭಟ ಹೆಚ್ಚಾಗುತ್ತಿದೆ. ಇಂದು ಸೆಪ್ಟೆಂಬರ್ ನಂತರ ಅತಿಹೆಚ್ಚು ಕೊರೊನಾ ಪ್ರಕರಣಗಳು ದಾಖಲಾಗಿದ್ದು, 24 ಗಂಟೆಯಲ್ಲಿ 89,129 ಹೊಸ ಕೇಸ್ ದಾಖಲಾಗಿದ್ದು 714 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಕಳೆದ 24 ಗಂಟೆಯಲ್ಲಿ ಭಾರತದಲ್ಲಿ ಸೆಪ್ಟೆಂಬರ್ ನಂತರ ಅತಿಹೆಚ್ಚು ಕೊರೊನಾ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಹೊಸ ಸೋಂಕಿನೊಂದಿಗೆ ದೇಶದಲ್ಲಿ ಒಟ್ಟಾರೆ ಕೊರೋನಾಪೀಡಿತರ ಸಂಖ್ಯೆ 1,23,92,260ಕ್ಕೆ ಏರಿದ್ದರೆ, ಮೃತರ ಸಂಖ್ಯೆ 1,64,110ಕ್ಕೆ ಹೆಚ್ಚಳವಾಗಿದೆ. 2020ರ ಅ.2 ರಂದು ದೇಶದಲ್ಲಿ 81,484 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಡಿ.6 ರಂದು 482 ಮಂದಿ ಸಾವೀಗಾಡಿದ್ದರು. ಆನಂತರ ಇಷ್ಟೊಂದು ಸಂಖ್ಯೆಯ ಸೋಂಕು, ಸಾವು ಕಾಣಿಸಿಕೊಂಡಿರುವುದು ಇದೇ ಮೊದಲು ಎಂದು ಕೇಂದ್ರ ಸರ್ಕಾರದ ಅಂಕಿ-ಅಂಶಗಳು ತಿಳಿಸಿವೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 6,58,909ಕ್ಕೆ ಹೆಚ್ಚಳವಾಗಿದೆ. ಇದು ಒಟ್ಟು ಸೋಂಕಿತರ ಸಂಖ್ಯೆಯಲ್ಲಿ ಶೇ.5ರಷ್ಟಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 44,202 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ 1,15,69,241ಕ್ಕೆ ತಲುಪಿದೆ.

ಭಾರತದಲ್ಲಿ ಒಂದೇ ದಿನ 10,46,605 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 24,69,59,192 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಇದೀಗ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 7,30,54,295 ಮಂದಿಗೆ ಲಸಿಕೆಯನ್ನು ನೀಡಲಾಗಿದೆ. ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights