ಈಶ್ವರಪ್ಪರನ್ನು ಉಚ್ಛಾಟಿಸಿ; ಇಲ್ಲವೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ: ಬಿಎಸ್‌ವೈಗೆ ಡಿಕೆಶಿ ಸವಾಲು

ಸಿಎಂ ಯಡಿಯೂರಪ್ಪ ವಿರುದ್ಧವೇ ರಾಜ್ಯಪಾಲರಿಗೆ ಈಶ್ವರಪ್ಪ ದೂರು ನೀಡಿದ್ದಾರೆ. ಅಲ್ಲದೆ, ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಹೀಗಿರುವಾಗ ಯಡಿಯೂರಪ್ಪ ಅವರು ಸರಿಯಾಗಿ ಕೆಲಸ ಮಾಡುತ್ತಿದ್ದರೆ ಈಶ್ವರಪ್ಪ ಅವರನ್ನು ಇಂದು ಸಂಜೆಯೊಳಗೆ ಸಂಪುಟದಿಂದ ಉಚ್ಛಾಟಿಸಲಿ. ಇಲ್ಲವೇ, ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಆಗ್ರಹಿಸಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಈವರೆಗೆ ಯಾವ ಒಬ್ಬ ಸಚಿವರು ಸಿಎಂ ಆಡಳಿತದ ಬಗ್ಗೆ ಚರ್ಚೆ ಮಾಡಿಲ್ಲ. ಆದ್ರೇ ಇದೀಗ ಸಚಿವ ಈಶ್ವರಪ್ಪನವರು ಮಾಡಿದ್ದಾರೆ. ಈ ಮೂಲಕ ದೇಶಕ್ಕೆ ಪಾಠ ಹೇಳುತ್ತಿದ್ದವರು ಆಡಳಿತ ಪಾಠವನ್ನು ದೇಶಕ್ಕೆ ಮಾಡಿದ್ದಾರೆ ಎಂದರು.

ಇನ್ನೂ ಮುಂದುವರೆದು ಮಾತನಾಡಿದಂತ ಅವರು, ಸಚಿವ ಈಶ್ವರಪ್ಪ ಬರೆದಿರುವಂತ ಪತ್ರ ಕೇವಲ ಪತ್ರವಲ್ಲ. ರಾಜ್ಯ ಸರ್ಕಾರದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ರಾಜ್ಯಪಾಲರಿಗೆ ಪತ್ರ ಬರೆದು ಸಿಎಂ ಮೇಲೆ ವಿಶ್ವಾಸ ಇಲ್ಲ ಎಂದಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಆಡಳಿತ ಸಂಪೂರ್ಣವಾಗಿ ಕುಸಿದಿದೆ. ಸಚಿವರಿಗೆ ಸಿಎಂ ಮೇಲೆ ವಿಶ್ವಾಸ ಇಲ್ಲದಂತಾಗಿದೆ ಎಂದರು.

ಇದನ್ನೂ ಓದಿ: ರಾಜೀನಾಮೆಗೆ ರೆಡಿಯಾದ ಈಶ್ವರಪ್ಪ!? ಯಡಿಯೂರಪ್ಪ ಪದಚ್ಯುತಿಗೆ RSS ಮೂಲದ BJPಗರ ಸಿದ್ದತೆ!?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights