ಮತ್ತೆ ಕೊರೊನಾ ಆಕ್ರಮಣ: ದೇಶದಲ್ಲಿ 24 ಗಂಟೆಯಲ್ಲಿ 93,000 ಸೋಂಕಿತರ ಪತ್ತೆ!

ದೇಶದಲ್ಲಿ ಮತ್ತೆ ಕೊರೊನಾ ಅಬ್ಬರ ಆವರಿಸುತ್ತಿದೆ. ಕಳೆದ ಒಂದು ವಾರದಿಂದ ಮತ್ತೆ ಗಣನೀಯವಾಗಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 93,249 ಹೊಸ ಕೋವಿಡ್‌ ಪ್ರಕರಣಗಳು ದಾಖಲಾಗಿವೆ. 513 ಜನರು ಸೋಂಕಿನಿಂದ ಬಲಿಯಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,24,85,509ಕ್ಕೆ ಏರಿಕೆಯಾಗಿದೆ. ಸೋಂಕಿಗೆ ಬಲಿಯಾದವರ ಸಂಖ್ಯೆ 1,64,623 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 6,91,597 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,16,29,289 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 60,048 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಈವರೆಗೆ 7,59,79,651 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

ಇದನ್ನೂ ಓದಿ: ಸರ್ಕಾರದ ಕೊರೊನಾ ಟಫ್ ರೂಲ್ಸ್ ವಿರುದ್ಧ ಜಿಮ್, ಥಿಯೇಟರ್ ಮಾಲೀಕರ ವಿರೋಧ..!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights