ಭ್ರಷ್ಟಾಚಾರದ ಆರೋಪ : ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಅನಿಲ್ ದೇಶ್‌ಮುಖ್..!
ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಅವರ ವಿರುದ್ಧದ ಭ್ರಷ್ಟಾಚಾರದ ಆರೋಪಗಳ ಬಗ್ಗೆ ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶಿಸಿದ ಹಿನ್ನೆಲೆಯಲ್ಲಿ ಅನಿಲ್ ದೇಶ್‌ಮುಖ್ ಸೋಮವಾರ ಮಹಾರಾಷ್ಟ್ರ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಅವರು ನೀಡಿದ್ದ ದೂರಿನಲ್ಲಿ ಪ್ರತಿ ತಿಂಗಳೂ 100 ಕೋಟಿ ವಸೂಲಿ ಮಾಡಿ ನೀಡುವಂತೆ ಕೆಲವು ಪೊಲೀಸ್ ಅಧಿಕಾರಿಗಳಿಗೆ ಅನಿಲ್ ದೇಶ್‌ಮುಖ್ ಆದೇಶಿಸಿದ್ದರು ಎಂದು ಪರಮ್ ಬೀರ್ ಸಿಂಗ್ ಆರೋಪಿಸಿದ್ದರು. ಈ ಸಂಬಂಧ ತನಿಖೆ ನಡೆಸುವಂತೆ ಪರಮ್ ಬೀರ್ ಸೇರಿದಂತೆ ಅನೇಕರು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇದರ ಬಗ್ಗೆ ಬಾಂಬೆ ಹೈಕೋರ್ಟ್ ಸಿಬಿಐ ತನಿಖೆಗೆ ಆದೇಶಿಸಿದ ನಂತರ, ದೇಶಮುಖ್ ಅವರು ಸ್ಥಾನದಿಂದ ಕೆಳಗಿಳಿಯುವ ಇಚ್ಚೆಯನ್ನು ವ್ಯಕ್ತಪಡಿಸಿದ್ದಾರೆ.
— ANIL DESHMUKH (@AnilDeshmukhNCP) April 5, 2021
ದೇಶ್‌ಮುಖ್ ಅವರು ರಾಜ್ಯ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾಗಿ ರಾಜೀನಾಮೆ ಹಸ್ತಾಂತರಿಸಿದ್ದಾರೆ. ಬಾಂಬೆ ಹೈಕೋರ್ಟ್‌ನ ಆದೇಶದ ನಂತರ ಗೃಹ ಸಚಿವರಾಗಿ ಮುಂದುವರಿಯುವುದು ನೈತಿಕವಾಗಿ ಸರಿಯಾಗಿಲ್ಲ ಎಂದು ದೇಶಮುಖ್ ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
ದೇಶ್‌ಮುಖ್ ವಿರುದ್ಧದ ಭ್ರಷ್ಟಾಚಾರ ಮತ್ತು ದುಷ್ಕೃತ್ಯದ ಆರೋಪಗಳನ್ನು ಒಳಗೊಂಡ ಈ ಪ್ರಕರಣವನ್ನು ‘ಅಸಾಧಾರಣ ಮತ್ತು ಅಭೂತಪೂರ್ವ’ ಎಂದು ಪರಿಗಣಿಸಿ, ನ್ಯಾಯಾಲಯವು ಸಿಬಿಐಗೆ 15 ದಿನಗಳೊಳಗೆ ತನಿಖೆ ಪೂರ್ಣಗೊಳಿಸುವಂತೆ ಕೋರಿದೆ, ನಂತರ ಸಿಬಿಐ ನಿರ್ದೇಶಕರು ಮುಂದಿನ ಕ್ರಮ ಕೈಗೊಳ್ಳಲು ಸ್ವಾತಂತ್ರ್ಯವಿದೆ.