ದೇಶದಲ್ಲಿ ಕೊರೊನಾ ರುದ್ರನರ್ತನ : 96,982 ಹೊಸ ಕೇಸ್ : ಒಂದು ಕೋಟಿ ದಾಟಿದ ಸೊಂಕಿತರ ಸಂಖ್ಯೆ!

ದೇಶದಲ್ಲಿ ಕೊರೊನಾ ಹಾವಳಿ ಮುಂದುವರೆದಿದ್ದು ಕಳೆದ 24 ಗಂಟೆಗಳಲ್ಲಿ 96,982 ಹೊಸ ಪ್ರಕರಣಗಳು ದಾಖಲಾಗಿದ್ದು ಒಟ್ಟು ಸೊಂಕಿತರ ಸಂಖ್ಯೆ 1.26 ಕೋಟಿಯಷ್ಟಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಹೌದು… ಭಾರತದಲ್ಲಿ ಕೊರೋನವೈರಸ್ ಸಾಂಕ್ರಾಮಿಕ ರೋಗ ಪ್ರಾರಂಭವಾದ ನಂತರ ಮೊದಲ ಬಾರಿಗೆ ದೇಶವು ಒಂದೇ ದಿನದಲ್ಲಿ 1 ಲಕ್ಷಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿದೆ. ಭಾರತ 1.03 ಲಕ್ಷ ಹೊಸ ಕೊರೊನಾವೈರಸ್ ಪ್ರಕರಣಗಳನ್ನು ದಾಖಲಿಸಿದ್ದರಿಂದ, ಮುಂದಿನ ಮೂರು ದಿನಗಳಲ್ಲಿ ಕೇಂದ್ರವು ಮುಖ್ಯಮಂತ್ರಿಗಳು ಮತ್ತು ರಾಜ್ಯ ಆರೋಗ್ಯ ಮಂತ್ರಿಗಳೊಂದಿಗೆ ಮತ್ತೊಂದು ಸುತ್ತಿನ ಸಭೆಗಳನ್ನು ಕರೆದಿದೆ.

ಕಳೆದ 24 ಗಂಟೆಗಳಲ್ಲಿ ಭಾರತ 96,982 ಹೊಸ ಕೊರೊನಾವೈರಸ್ ಪ್ರಕರಣಗಳನ್ನು ದಾಖಲಿಸಿದ್ದು 50,143 ಸೋಂಕಿತರು ಡಿಸ್ಚಾರ್ಜ್ ಆಗಿದ್ದಾರೆ. ಇದರಲ್ಲಿ 446 ಸೋಂಕಿತರು ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಈವರೆಗೆ ಕೊರೊನಾ ಒಟ್ಟು ಪ್ರಕರಣಗಳ ಸಂಖ್ಯೆ 1,26,86,049 ರಷ್ಟಿದ್ದು ಈ ಪೈಕಿ 1,17,32,279 ಸೋಂಕಿತರು ಗುಣಮುಖರಾಗಿದ್ದಾರೆ. 7,88,223 ಸಕ್ರಿಯ ಪ್ರಕರಣಗಳಿದ್ದು, 1,65,547 ಸಾವಿನ ಸಂಖ್ಯೆರಷ್ಟಾಗಿದೆ. 8,31,10,926 ಜನರಿಗೆ ಈವರೆಗೆ ಕೊರೊನಾ ಲಸಿಕೆ ನೀಡಲಾಗಿದೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.