ತಮಿಳುನಾಡು ಸೇರಿದಂತೆ ಪಂಚರಾಜ್ಯಗಳಲ್ಲಿ ಮೂರನೇ ಹಂತದ ಮತದಾನ ಆರಂಭ…!

ತಮಿಳುನಾಡಿನಲ್ಲಿ 2021ರ ವಿಧಾನಸಭಾ ಚುನಾವಣೆ ಇತಿಹಾಸದಲ್ಲೇ ಬಹಳ ಮಹತ್ವದ ಚುನಾವಣೆ ಎಂದು ಹೇಳಲಾಗುತ್ತಿದೆ. ಏಕೆಂದರೆ ತಮಿಳುನಾಡಿನ ಬಲಿಷ್ಠ ರಾಜಕೀಯ ನಾಯಕರಾದ ಡಿಎಂಕೆ ನಾಯಕ ಎಂ ಕರುಣಾನಿಧಿ ಮತ್ತು ಎಐಎಡಿಎಂಕೆ ನಾಯಕಿ ಜೆ ಜಯಲಲಿತಾ ಅವರ ಅನುಪಸ್ಥಿತಿಯಲ್ಲಿ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ.

ರಾಜ್ಯದಲ್ಲಿ ಇಂದು ಒಂದೇ ಹಂತದಲ್ಲಿ 234 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.  ತಮಿಳುನಾಡಿನಲ್ಲಿ ಪುರುಷರಿಗಿಂತ (3,09,23,651) ಮಹಿಳೆಯರೇ (3,19,39,112) ಅಧಿಕ ಸಂಖ್ಯೆಯಲ್ಲಿದ್ದಾರೆ. 7,192 ತೃತೀಯ ಲಿಂಗ ಜನರನ್ನು ಒಳಗೊಂಡಂತೆ 6.28 ಕೋಟಿ ಮತದಾರರು 3,998 ಅಭ್ಯರ್ಥಿಗಳಲ್ಲಿ ತಮ್ಮ ನಾಯಕನನ್ನು ಆರಿಸಲಿದ್ದಾರೆ.

iojtbcpo

ಡಿಎಂಕೆ ಮತ್ತು ಎಐಎಡಿಎಂಕೆ ಪ್ರಾಬಲ್ಯ ಹೊಂದಿರುವ ರಾಜ್ಯದಲ್ಲಿ ನಟ-ರಾಜಕಾರಣಿ ಕಮಲ್ ಹಾಸನ್ ಮತ್ತು ಅವರ ಎಂಎನ್ಎಂ (ಮಕ್ಕಲ್ ನೀಧಿ ಮಾಯಮ್) ಸ್ಪರ್ಧಿಸುತ್ತಿದ್ದಾರೆ.

ಇಂದು ಬೆಳಿಗ್ಗೆ 7 ಗಂಟೆಗೆ ಮತದಾನ ಪ್ರಾರಂಭವಾಗಿದ್ದು, ಕೋವಿಡ್ ಪ್ರೋಟೋಕಾಲ್‌ಗಳಿಗೆ ಸಾಮಾಜಿಕ ದೂರವಿರಲು ಅನುಕೂಲವಾಗುವಂತೆ ಬೂತ್‌ಗಳ ಸಂಖ್ಯೆಯನ್ನು ಸುಮಾರು 89,000 ಕ್ಕೆ ಹೆಚ್ಚಿಸಲಾಗಿದೆ. 234 ಕ್ಷೇತ್ರಗಳಲ್ಲಿ ಒಟ್ಟು 3,998 ಅಭ್ಯರ್ಥಿಗಳಿದ್ದು, ಸುಮಾರು 6.3 ಕೋಟಿ ಜನರು ಮತ ಚಲಾಯಿಸಲು ಅರ್ಹರಾಗಿದ್ದಾರೆ. ಮೇ 2 ರಂದು ಚುನಾವಣೆಯ ಫಲಿತಾಂಶ ಪ್ರಕಟಿಸಲಾಗುವುದು.

ಇಂದು ತಮಿಳುನಾಡು ಮಾತ್ರವಲ್ಲದೇ ಪುದುಚೇರಿ ಹಾಗೂ ಕೇರಳದಲ್ಲಿ ಒಂದನೇ ಹಂತ ಹಾಗೂ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ 3ನೇ ಹಂತದ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. ಪಶ್ಚಿಮ ಬಂಗಾಳ ಹೊರತುಪಡಿಸಿ ಉಳಿದ 4 ರಾಜ್ಯಗಳಲ್ಲಿ ಚುನಾವಣೆ ಮುಕ್ತಾಯಗೊಳ್ಳಲಿದ್ದು, ಮೇ.2 ರಂದು ಫಲಿತಾಂಶ ಪ್ರಕಟವಾಗಲಿದೆ. ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ಬಗ್ಗೆ ಹೇಳುವುದಾದರೆ ಇಲ್ಲಿ 94 ವಿಧಾನಸಭಾ ಸ್ಥಾನಗಳಿಗೆ 8 ಹಂತಗಳಲ್ಲಿ ಮತದಾನ ನಡೆಯಲಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights