ರಾಜ್ಯದಲ್ಲಿ ಕೊರೊನಾ ಹಾವಳಿ ತಡೆಗೆ ಏಪ್ರಿಲ್ 11 ರಿಂದ ಕೆಲಸದ ಸ್ಥಳದಲ್ಲೇ ಕೊರೊನಾ ಲಸಿಕೆ..!

ಕೊರೊನಾ 2ನೇ ಅಲೆಯನ್ನು ತಡೆಯಲು ರಾಜ್ಯ ಸರ್ಕಾರ ನಾನಾ ಯೋಜನೆಗಳನ್ನು ಕಾರ್ಯ ರೂಪಕ್ಕೆ ತರುತ್ತಿದೆ. ಹೀಗಾಗಿ ಏಪ್ರಿಲ್ 11 ರಿಂದ ಕೆಲಸದ ಸ್ಥಳಗಳಿಗೆ ಹೋಗಿ ಕೊರೊನಾ ಲಸಿಕೆ ನೀಡಲು ಸರ್ಕಾರ ನಿರ್ಧರಿಸಿದೆ.

ಹೌದು… ರಾಜ್ಯದಲ್ಲಿ ಕೊರೊನಾ ಹಾವಳಿ ಹೆಚ್ಚಾಗುತ್ತಿರುವುದರಿಂದ ಆತಂಕ ವ್ಯಕ್ತಪಡಿಸಿದ ಆರೋಗ್ಯ ಸಚಿವ ಡಾ. ಕೆ ಸುಧಾಕರ್, ” ಏಪ್ರಿಲ್ 11 ರಿಂದ ಕೆಲಸದ ಸ್ಥಳಗಳಲ್ಲಿ ಕೊರೊನಾ ಲಸಿಕೆ ನೀಡಲಾಗುವುದು ” ಎಂದಿದ್ದಾರೆ.

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳ ಕಂಡುಬಂದಿದೆ. ನಿತ್ಯದ ಪ್ರಕರಣಗಳ ಸಂಖ್ಯೆ ಐದು ಸಾವಿರ ಸಮೀಪಿಸಿದೆ. ಪಾಸಿಟಿವಿಟಿ ದರ ಶೇ.5.56ಕ್ಕೆ ತಲುಪಿದೆ. ಬುಧವಾರ ರಾಜ್ಯದಲ್ಲಿ 35 ಮಂದಿ ಕೊರೊನಾದಿಂದ ಮೃತಪಟ್ಟಿದ್ದರೆ 25 ಪ್ರಕರಣಗಳು ಬೆಂಗಳೂರಿನಲ್ಲೇ ಇವೆ.

ಹೀಗಾಗಿ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಬೀದರ್, ಬೆಳಗಾವಿ, ವಿಜಯಪುರ, ಕಲಬುರಗಿ, ಚಿಕ್ಕಮಂಗಳೂರು, ದಕ್ಷಿಣ ಕನ್ನಡ, ಉಡುಪಿ, ಹಾಸನ, ಮಂಡ್ಯ, ಮೈಸೂರು ಮತ್ತು ಚಿತ್ರದುರ್ಗ ಹೀಗೆ 12 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಬುಧವಾರ ವಿಡಿಯೋ ಸಂವಾದ ನಡೆಸಲಾಗಿದೆ. ಬಳಿಕ ಮಾತನಾಡಿದ ಸಚಿವ ಸುಧಾಕರ್ ಬೃಹತ್ ಉದ್ದಿಮೆಗಳು ಮತ್ತು ಮಾಃಇತಿ ತಂತ್ರಜ್ಞಾನ ಕ್ಷೇತ್ರದ ಸಂಸ್ಥೆಗಳ ಮನವಿಯನ್ನು ಪುರಸ್ಕರಿಸಿರುವ ಕೇಂದ್ರ ಸರ್ಕಾರ, ಕೆಲಸದ ಸ್ಥಳದಲ್ಲಿ ಲಸಿಕೆ ನೀಡಲು ಅನುಮತಿ ನೀಡಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights