10th ಪಾಸಾದ ಮಹಿಳೆಯರಿಗೆ ಉದ್ಯೋಗಾವಕಾಶ: ಗ್ರಾಮ ಪಂಚಾಯತಿಗಳಲ್ಲಿ ಅರ್ಜಿ ಆಹ್ವಾನ!

ಮೈಸೂರು ಜಿಲ್ಲೆಯಲ್ಲಿರುವ 57 ಗ್ರಾಮ ಪಂಚಾಯತಿಗಳಲ್ಲಿ ಕಾಯಕಮಿತ್ರ ಹುದ್ದೆಗಳು ಖಾಲಿ ಇದ್ದು, ಆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ನರೇಗಾ ಯೋಜನೆಯಡಿ ಹುದ್ದೆಗೆ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಲಾಗಿದ್ದು, ಮಹಿಳೆಯರು ಮಾತ್ರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಗೊಳ್ಳುವ ಮಹಿಳೆಯರಿಗೆ 6,000 ರೂ ಗೌರವಧನ ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

10ನೇ ತರಗತಿ ಪಾಸು ಮಾಡಿರುವ ಮಹಿಳೆಯರು ಅರ್ಜಿಯನ್ನು ಸಲ್ಲಿಸಬಹುದು. ಅವರು ಆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿಯೇ ವಾಸುತ್ತಿರಬೇಕು ಎಂದೂ ಹೆಳಲಾಗಿದೆ.

ಅರ್ಜಿ ಸಲ್ಲಿಸಲು ಅರ್ಹತೆಗಳು?

  • ಕನಿಷ್ಠ 10ನೇ ತರಗತಿ ಪಾಸು ಮಾಡಿರಬೇಕು.
  • ದಿನಾಂಕ 1.1.2021ಕ್ಕೆ ಅನ್ವಯಿಸುವಂತೆ ತಾವು ಅರ್ಜಿ ಸಲ್ಲಿಸುವ ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕ್ರಿಯಾಶೀಲ ಜಾಬ್‍ಕಾರ್ಡ್ ಹೊಂದಿರಬೇಕು.
  • ಅಭ್ಯರ್ಥಿಯು ಕಳೆದ 3 ವರ್ಷಗಳಲ್ಲಿ (2018-19, 2019-20, 2020-21) ಕನಿಷ್ಠ 2 ವರ್ಷ ಯೋಜನೆಯಡಿ ಅಕುಶಲ ಕೂಲಿಕಾರರಾಗಿ ಕೆಲಸ ನಿರ್ವಹಿಸಬೇಕು.
  • 2021ರ ಜನವರಿ 1ಕ್ಕೆ ಅನ್ವಯವಾಗುವಂತೆ ಗರಿಷ್ಠ 45 ವರ್ಷ ಮೀರಿರಬಾರದು.
  • ಆಯಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಾಸಿಸುತ್ತಿರುಬೇಕು.
  • ಸಂವಹನ ಕೌಶಲ, ಉತ್ತಮ ನಾಯಕತ್ವ ಗುಣ ಹಾಗೂ ಸಮುದಾಯದೊಂದಿಗೆ ಸ್ಪಂದಿಸುವ ಗುಣ ಲಕ್ಷಣಗಳನ್ನು ಹೊಂದಿರಬೇಕು.
  • ಗ್ರಾಮ ರೋಜ್‍ಗಾರ್ ಮಿತ್ರರು ಸಮುದಾಯ ಕಾರ್ಯನಿರ್ವಹಣೆ ಮಾಡಲು ನಿರ್ದಿಷ್ಟ ಸಮಯವನ್ನು ನೀಡಬೇಕಾಗಿದ್ದು, ಇದಕ್ಕೆ ಗ್ರಾಮ ರೋಜ್‍ಗಾರ್ ಮಿತ್ರರ ಕುಟುಂಬ ಮತ್ತು ಸಮಾಜ ಬೆಂಬಲವಾಗಿರಬೇಕು.

ಅರ್ಜಿ ಸಲ್ಲಿಸಲು ಕೊನೇ ದಿನಾಂಕ 15.4.2021 ಆಗಿದ್ದು, ಹೆಚ್ಚಿನ ಮಾಹಿತಿಗಾಗಿ ಮೈಸೂರು ಜಿಲ್ಲೆಯಲ್ಲಿರುವ ತಮ್ಮ ಹತ್ತಿರ ಗ್ರಾಮ ಪಂಚಾಯತಿಗಳನ್ನು ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ: https://mysore.nic.in/


ಇದನ್ನ ಓದಿ: ಕೊರೊನಾ ಅಬ್ಬರ: ಬೆಂಗಳೂರಿನಲ್ಲಿ ಏಪ್ರಿಲ್‌ 20ರ ವರೆಗೆ ನಿಷೇಧಾಜ್ಞೆ ಜಾರಿ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights