ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಪೊಲೀಸ್‌ ಸೇರಿ ನಾಲ್ವರ ಬಂಧನ!

ಜಮ್ಮು-ಕಾಶ್ಮೀರದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಬೆಳಕಿಗೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಪೊಲೀಸ್ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ಕುಲ್ಗಂ ಜಿಲ್ಲೆಯಲ್ಲಿ ಘಟನೆ ನಡೆದಿದೆ. ’ಬೊನಿಗಾಮ್ ಖಾಜಿಗುಂಡ್‌ನಲ್ಲಿ ತನ್ನ ಮಗಳ ಮೇಲೆ ಮೂವರು ಅತ್ಯಾಚಾರವೆಸಗಿದ್ದಾರೆ. ಇದಕ್ಕೆ ಡ್ಯಾಮ್ಜೆನ್ ಪ್ರದೇಶದ ಮಹಿಳೆಯೊಬ್ಬರು ಸಹಾಯ ಮಾಡಿದ್ದಾರೆ ಎಂದು  ಮಹಿಳೆಯೊಬ್ಬರು ಖಾಜಿಗುಂಡ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

“ಬಾಲಕಿಯ ವೈದ್ಯಕೀಯ ಪರೀಕ್ಷೆಯ ಸಮಯದಲ್ಲಿ ಆಕೆ ಗರ್ಭಿಣಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಈ ಮೂಲಕ ಅತ್ಯಾಚಾರ ಪ್ರಕರಣ ಹೊರಬಂದಿದೆ” ಎಂದು ಪೊಲೀಸ್ ಇಲಾಖೆಯ ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.

ದೂರು ಸ್ವೀಕರಿಸಿದ ನಂತರ, ಪೊಲೀಸ್ ಠಾಣೆ ಖಾಜಿಗುಂಡ್‌ನಲ್ಲಿ ಹಲವು ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಪ್ರಾರಂಭಿಸಲಾಯಿತು, ತನಿಖೆ ನಡೆಸಿ ಅಪರಾಧದಲ್ಲಿ ಭಾಗಿಯಾಗಿರುವ ಎಲ್ಲ ಆರೋಪಿಗಳನ್ನು ಬಂಧಿಸಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳನ್ನು ಬೀಬ್ರಾಡಾ ಪರಿಗಂ ನಿವಾಸಿ ಜಹೂರ್ ಅಹ್ಮದ್ ಮಿರ್, ಚೆಯಾನ್ ದೇವ್ಸರ್ ನಿವಾಸಿ ಈಜಾಜ್ ಅಹ್ಮದ್ ಶಾ, ಕಿಫಾಯತ್ ಅಹ್ಮದ್ ಮಲ್ಲಿಕ್ ಮತ್ತು ಶಬ್ರೂಜಾ ಎಂದು ಗುರುತಿಸಲಾಗಿದೆ. ಆದರೆ, ಇದರಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿ ಯಾರು ಎಂದು ತಿಳಿಸಿಲ್ಲ.

ಅತ್ಯಾಚಾರ ಕೃತ್ಯ ನಡೆದಾಗ ಆರೋಪಿ ಪೊಲೀಸ್ ಸಿಬ್ಬಂದಿ ಕರ್ತವ್ಯದಲ್ಲಿ ಇರಲಿಲ್ಲ ಮತ್ತು ಕೃತ್ಯ ಪೊಲೀಸ್ ಆವರಣದೊಳಗೆ ನಡೆದಿಲ್ಲ. ಕ್ರಿಮಿನಲ್ ಮೊಕದ್ದಮೆಗಳ ಜೊತೆಗೆ, ಆತನ ವಿರುದ್ಧ ಇಲಾಖಾ ಕ್ರಮಗಳನ್ನು ಸಹ ಪ್ರಾರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಪರೀಕ್ಷಾ ಪೆ ಚರ್ಚಾ ನಡೆಸುವ ಮೋದಿ, ಖರ್ಚಾ ಪೆ ಚರ್ಚಾ ನಡೆಸಬೇಕು: ರಾಹುಲ್‌ಗಾಂಧಿ

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights