ಸಾರಿಗೆ ಸಮರ : ಬಸ್ ಇಲ್ಲದೆ ವಿದ್ಯಾರ್ಥಿಗಳ ಪರದಾಟ- ಬೆಂಗಳೂರು ವಿವಿ ಪರೀಕ್ಷೆ ಮುಂದೂಡಿಕೆ….!

ರಾಜ್ಯದಲ್ಲಿ ಸಾರಿಗೆ ಮುಷ್ಕರ ಇಂದೂ ಕೂಡ ಮುಂದುವರೆದಿದ್ದು, ಪ್ರಯಾಣಿಕರು ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ. ಖಾಸಗೀ ಬಸ್ ಗಳು ದುಬಾರಿ ಹಣವನ್ನು ಪೀಕುತ್ತಿವೆ. ಹಗಲು ಸುಲಿಗೆಗೆ ಮುಂದಾಗಿವೆ. ಜೊತೆಗೆ ಕೊರೊನಾ 2ನೇ ಅಲೆ ಬೇರೆ ಹೆಚ್ಚಾಗುತ್ತಿದೆ. ಹೀಗಾಗಿ ಬೆಂಗಳೂರು ವಿವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಹೌದು… ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಇಂದು ನಿಗದಿಯಾಗಿದ್ದ ಬೆಂಗಳೂರು ವಿಶ್ವವಿದ್ಯಾನಿಲಯದ ಎಲ್ಲ ಪರೀಕ್ಷೆಗಳು ಮುಂದೂಡಿಕೆಯಾಗಿವೆ ಎಂದು ವಿವಿ ಮಾಹಿತಿ ನೀಡಿದೆ. ದಿನನಿತ್ಯ ಸಾರಿಗೆ ಬಸ್ ಗಳನ್ನೇ ಅವಲಂಭಿಸಿದ ವಿದ್ಯಾರ್ಥಿಗಳಿಗೆ ಸಾರಿಗೆ ಮುಷ್ಕರದಿಂದ ತೊಂದರೆ ಅನುಭವಿಸುವಂತಾಗಿದೆ. ಮಾತ್ರವಲ್ಲದೇ ಖಾಸಗಿ ಬಸ್ ಗಳಿಂದ ದುಬಾರಿ ಹಣ ಕೊಟ್ಟು ಪ್ರಯಾಣಿಸುವಂತಹ ಸ್ಥಿತಿ ನಿರ್ಮಾಣವಾಗಿದೆ.

ಹೀಗಾಗಿ ಏಪ್ರಿಲ್ 8 ಹಾಗೂ 9 ರಂದು ನಿಗದಿಯಾಗಿದ್ದ ಸ್ನಾತಕೋತ್ತರ ಪದವಿ ಪರೀಕ್ಷೆ ಮುಂದೂಡಿಕೆ ಮಾಡಿ ಬೆಂಗಳೂರು ವಿಶ್ವವಿದ್ಯಾಲಯ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ವಿದ್ಯಾರ್ಥಿಗಳ ಒತ್ತಾಯದ ಮೇರೆಗೆ ಪರೀಕ್ಷೆ ಮುಂದೂಡಲಾಗಿದ್ದು, ಶೀಘ್ರದಲ್ಲೇ ಪರೀಕ್ಷೆಗೆ ದಿನಾಂಕ ಪ್ರಕಟಿಸಲಾಗುವುದು ಎಂದು ಬೆಂಗಳೂರು ವಿವಿ ಮಾಹಿತಿ ನೀಡಿದೆ.

ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ನೌಕರರು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ ಮಾಡುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಅನಾನುಕೂಲ ಉಂಟಾಗಿದೆ. ಹೀಗಾಗಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights