ದೇಶದಲ್ಲಿ ಮುಂದುವರೆದ ಕೊರೊನಾ ಹಾವಳಿ : 1 ಲಕ್ಷಕ್ಕೂ ಹೆಚ್ಚು ಹೊಸ ಕೇಸ್ – 780 ಸೋಂಕಿತರು ಬಲಿ!

ದೇಶದಲ್ಲಿ ಪ್ರತಿನಿತ್ಯ ಒಂದು ಲಕ್ಷಕ್ಕೂ ಹೆಚ್ಚು ಹೊಸ ಕೇಸ್ ದಾಖಲಾಗುತ್ತಿವೆ. ಕಳೆದ 24 ಗಂಟೆಯಲ್ಲಿ 1 ಲಕ್ಷಕ್ಕೂ ಹೆಚ್ಚು ಹೊಸ ಕೇಸ್ ದಾಖಲಾಗಿದ್ದು 780 ಸೋಂಕಿತರು ಬಲಿಯಾಗಿದ್ದಾರೆ.

ಹೌದು…  24 ಗಂಟೆಗಳಲ್ಲಿ ಭಾರತ 1,31,968 ಕೋವಿಡ್ -19 ಪ್ರಕರಣಗಳು ಮತ್ತು 780 ಸಾವುಗಳನ್ನು ವರದಿ ಮಾಡಿದೆ. ದೇಶದಲ್ಲಿ 9,79,608 ಸಕ್ರಿಯ ಪ್ರಕರಣಗಳು ಮತ್ತು 1,19,13,292 ಜನ ಸೋಂಕಿನಿಂದ ಗುಣಮುಖರಾಗಿದ್ದು 1,67,642 ಜನ ಈವರೆಗೆ ಮಹಾಮಾರಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಹೀಗಾಗಿ ಕೊರೊನಾ ತಡೆಗೆ ಗುರುವಾರ ಮುಖ್ಯಮಂತ್ರಿಗಳೊಂದಿಗಿನ ಸಭೆ ನಡೆಸಲಾಗಿದ್ದು ಸೋಂಕು ಹರಡುವುದನ್ನು ತಡೆಯಲು ಬೇಕಾದ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲು ನರೇಂದ್ರ ಮೋದಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರ ಪ್ರದೇಶಗಳಿಗೆ ನಿರ್ದೇಶನ ನೀಡಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights