ಹಳೇ ಮೈಸೂರು ಭಾಗದಲ್ಲಿ ಬೇರು ಬಿಡಲು ಬಿಜೆಪಿ ಯತ್ನ; ಪಕ್ಷದ ಚಟುವಟಿಕೆಗಳಿಗೆ ಕೇಂದ್ರವಾದ ಹಾಸನ!

ಒಕ್ಕಲಿಗರ ಪ್ರಾಬಲ್ಯವಿರುವ ಹಳೇ ಮೈಸೂರು ಭಾಗದಲ್ಲಿ ಕಮಲವನ್ನು ಚಿಗುರಿಸಲು ಹವಣಿಸುತ್ತಿರುವ ಬಿಜೆಪಿ, ಈ ಭಾಗದ ಎಲ್ಲಾ ಚಟುವಟಿಗಳಿಗೆ ಹಾಸನವನ್ನು ಕೇಂದ್ರ ಸ್ಥಳವನ್ನಾಗಿ ಮಾಡಿಕೊಂಡಿದೆ.

ಬಿಜೆಪಿ ಕಾರ್ಯಕಾರಿ ಸಮಿತಿ ಹಾಗೂ ಬಿಜೆಪಿ ಕೋರ್ ಕಮಿಟಿ ಸಭೆಗಳನ್ನು ಹಾಸನದಲ್ಲಿ ನಡೆಸಲಿದ್ದು, ಏಪ್ರಿಲ್ 18 ರಂದು ಕೋರ್ ಕಮಿಟಿ ಸಭೆ ನಡೆಯಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಕೋವಿಡ್ ಪರಿಸ್ಥಿತಿಯಿಂದಾಗಿ ಎರಡೂ ಸಭೆಗಳಲ್ಲಿ ಭಾಗವಹಿಸುವವರ ಸಂಖ್ಯೆಯನ್ನು ಕಡಿಮೆ ಮಾಡಲಾಗಿದೆ. ರಾಜ್ಯ ಕಾರ್ಯಕಾರಿಣಿಯಲ್ಲಿ, ಮೂಲತಃ ಸುಮಾರು 330 ಕ್ಕೂ ಹೆಚ್ಚು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಬೇಕಾಗಿದ್ದರೂ, ಅದನ್ನು ಕೇವಲ 180 ಕ್ಕೆ ಇಳಿಸಲಾಗಿದೆ ಎಂದು ಬಿಜೆಪಿ ಮುಖಂಡರೊಬ್ಬರು ತಿಳಿಸಿದ್ದಾರೆ.

ಬಿಜೆಪಿ ಬೆಂಬಲದೊಂದಿಗೆ ಇತ್ತೀಚೆಗೆ ಆಯ್ಕೆಯಾದ ಗ್ರಾಮ ಪಂಚಾಯಿತಿ ಸದಸ್ಯರಿಗೆ ಬಿಜೆಪಿ ಕಾರ್ಯಕಾರಿಣಿ ಕಾರ್ಯಾಗಾರಗಳನ್ನು ನಡೆಸಬಹುದು ಮತ್ತು ಮುಂಬರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಗಳ ಬಗ್ಗೆಯೂ ಚರ್ಚಿಸಲಿದ್ದಾರೆ.

ಈ ಮೊದಲು ಕಲಬುರಗಿಯಲ್ಲಿಏಪ್ರಿಲ್ 19 ರಂದು ಬಿಜೆಪಿ ಕಾರ್ಯಕಾರಿಣಿ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಕಲಬುರಗಿಯಲ್ಲಿ 40 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಹಾಗೂ ಚುನಾವಣಾಣ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಈ ಯೋಜನೆ ರದ್ದಾಯಿತು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಾಜ್ಯದ ಬೇರೆಬೇರೆ ಜಿಲ್ಲೆಗಳಲ್ಲಿ ಸಭೆ ನಡೆಸಲು ನಿರ್ಧರಿಸಿದ್ದರು, ಆದರೆ ಈ ಬಾರಿ ಹಾಸನದಲ್ಲಿ ನಡಸಲು ತೀರ್ಮಾನಿಸಲಾಯಿತು. ಈಗಾಗಲೇ ಮಂಗಳೂರು, ಶಿವಮೊಗ್ಗ ಮತ್ತು ಬೆಳಗಾವಿಯಲ್ಲಿ ಸಭೆ ನಡೆಸಲಾಗಿದೆ.

ಪಕ್ಷದ ಪದಾಧಿಕಾರಿಗಳು, ಬಿಜೆಪಿ ಮೋರ್ಚಾ ಪ್ರತಿನಿಧಿಗಳು, ವಿಭಾಗೀಯ ಮುಖ್ಯಸ್ಥರು ಮತ್ತು ಕೋರ್ ಕಮಿಟಿ ಸದಸ್ಯರು ಸಭೆಯ ಭಾಗವಾಗಲಿದ್ದಾರೆ ಎಂದು ಪಕ್ಷದ ವಕ್ತಾರ ಗಣೇಶ್ ಕಾರ್ಣಿಕ್ ಹೇಳಿದ್ದಾರೆ.

ಇದನ್ನೂ ಓದಿ: ಯತ್ನಾಳ್‌ ಅವರನ್ನು ಪಕ್ಷದಿಂದ ಹೊರಹಾಕಬೇಕಾದ್ದು ಅನಿವಾರ್ಯ: ಅರುಣ್‌ ಸಿಂಗ್‌

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights