ಕೋವಿಡ್ ಲಸಿಕೆ ಪಡೆದಿದ್ದ RSS ಮುಖ್ಯಸ್ಥ ಮೋಹನ್ ಭಾಗವತ್‌ಗೆ ಕೊರೊನಾ ಪಾಸಿಟಿವ್!
ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್)ನ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಕೋವಿಡ್-19 ಸೋಂಕು ತಗಲಿರುವುದು ದೃಢಪಟ್ಟಿದೆ. ಅವರು ಕೆಲವು ದಿನಗಳ ಹಿಂದೆ ಕೋವಿಡ್ ಲಸಿಕೆ ಪಡೆದಿದ್ದರು ಎಂದು ತಿಳಿದು ಬಂದಿದೆ.
ಈ ಬಗ್ಗೆ ಆರೆಸ್ಸೆಸ್‌ನ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್ ಟ್ವೀಟ್ ಮಾಡಿದ್ದು, ಭಾಗವತ್‌ಕೊರೊನಾ ವೈರಸ್ ಸೋಂಕಿನ ಸಾಮಾನ್ಯ ಲಕ್ಷಣಗಳು ಕಾಣಿಸಿಕೊಂಡಿವೆ. ಅವರನ್ನು ನಾಗ್ಪುರದ ಕಿಂಗ್ಸ್‌ವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾಮಾನ್ಯ ಆರೋಗ್ಯ ತಪಾಸಣೆ ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ ತಪಾಸಣೆಗಳನ್ನು ಮಾಡಲಾಗುತ್ತಿದೆ ಎಂದು ಮೂಲಗಳು ಹೇಳಿವೆ.
ಭಾಗವತ್ ಅವರು ಮಾರ್ಚ್ 7ರಂದು ಕೋವಿಡ್-19 ಲಸಿಕೆಯ ಮೊದಲ ಡೋಸ್ ಪಡೆದಿದ್ದರು.
ಮಹಾರಾಷ್ಟ್ರದ ಎಲ್ಲೆಡೆ ಕೋವಿಡ್-19 ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದ್ದು, ದೇಶಕ್ಕೆ ಈ ಸಾಂಕ್ರಾಮಿಕ ಕಾಲಿರಿಸಿದ ಒಂದು ವರ್ಷಕ್ಕೂ ಹೆಚ್ಚು ಕಾಲದ ಬಳಿಕ ಎರಡನೇ ಅಲೆ ದೇಶಕ್ಕೆ ಅಪ್ಪಳಿಸಿದೆ. ಮಹಾರಾಷ್ಟ್ರದಲ್ಲಿ ಶುಕ್ರವಾರ 58,993 ಹೊಸ ಪ್ರಕರಣಗಳು ವರದಿಯಾಗಿದ್ದು, 301 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಇದನ್ನೂ ಓದಿ: moಅಸ್ಸಾಂ ಫಲಿತಾಂಶಕ್ಕೂ ಮುನ್ನವೇ ಆಪರೇಷನ್ ಕಮಲ?; 20 ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಗಳು ರೆಸಾರ್ಟ್‌ಗೆ