‘ಟಿಎಂಸಿ ವಿರುದ್ಧ ಆಡಳಿತ ವಿರೋಧಿ ಅಲೆ ಇದೆ’; ಬಂಗಾಳದಲ್ಲಿ ಮಮತಾರಂತೆ ಮೋದಿಯೂ ಜನಪ್ರಿಯ: ಪ್ರಶಾಂತ್‌ ಕಿಶೋರ್‌ ಆಡಿಯೋ ಸೋರಿಕೆ!

ಬಂಗಾಳದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಬಹಳ ಜನಪ್ರಿಯರಾಗಿದ್ದರು ಎಂದು ಐ-ಪಿಎಸಿ ಮುಖ್ಯಸ್ಥ ಪ್ರಶಾಂತ್‌ ಕಿಶೋರ್‌ ಅವರು ಹೇಳಿರುವ ಆಡಿಯೋ ತುಣುಕುಗಳು ವೈರಲ್‌ ಆಗುತ್ತಿವೆ.

ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ನೇತೃತ್ವದ ಭಾರತೀಯ ರಾಜಕೀಯ ಕ್ರಿಯಾ ಸಮಿತಿ (ಐ-ಪಿಎಸಿ)ಯು ಬಂಗಾಳದಲ್ಲಿ ಟಿಎಂಸಿ ಪರವಾಗಿ ಮತದಾನ ಅಭಿಮಾನ ಮತ್ತು ತಂತ್ರಗಾರಿಕೆಯನ್ನು ರೂಪಿಸಿರುವ ಉಸ್ತುವಾರಿಯನ್ನು ವಹಿಸಿಕೊಂಡಿದೆ.

ಕ್ಲಬ್‌ಹೌಸ್‌ನಲ್ಲಿ ನಡೆದ ಸಾರ್ವಜನಿಕ ಚರ್ಚೆಯಲ್ಲಿ, ಕಿಶೋರ್ ಅವರು ಪ್ರಧಾನಿ ನರೇಂದ್ರ ಮೋದಿಯವರು ಬಂಗಾಳದ ಜನಪ್ರಿಯರಾಗಿದ್ದಾರೆ. ಅವರ ಜನಪ್ರಿಯತೆಯು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಪ್ರಬಲ ಪ್ರತಿಸ್ಪರ್ಧಿಯನ್ನು ಹುಟ್ಟು ಹಾಕಿದೆ ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ವಿರುದ್ಧ ಆಡಳಿತ ವಿರೋಧಿ ಅಲೆ ಇದೆ ಎಂದೂ ಕಿಶೋರ್ ಹೇಳಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಮತಗಳನ್ನು ಪಡೆಯಲು ಬಂಗಾಳದ ಮುಸ್ಲಿಂ ಸಮುದಾಯವನ್ನು ಸಮಾಧಾನಪಡಿಸುವಲ್ಲಿ ಕಾಂಗ್ರೆಸ್, ಟಿಎಂಸಿ ಮತ್ತು ಎಡಪಂಥೀಯರು ತೊಡಗಿಸಿಕೊಂಡಿದ್ದಾರೆ ಎಂದು ಕಿಶೋರ್ ಹೇಳಿದ್ದಾರೆ.

ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿರುವ ಒಂದು ಕ್ಲಿಪ್‌ನಲ್ಲಿ, ಟಿಎಂಸಿಯ ಪಕ್ಷದ ಸಮೀಕ್ಷೆಗಳಲ್ಲೂ ಸಹ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಪರವಾದ ಒಲವು ತಿಳಿದು ಬಂದಿದೆ ಎಂದು ಕಿಶೋರ್ ಹೇಳಿದ್ದಾರೆ.

ಆಯ್ದ ವಿಡಿಯೋ ತುಣುಕುಗಳನ್ನು ಮಾತ್ರ ಆನ್‌ಲೈನ್‌ನಲ್ಲಿ ಹಂಚಿಕೊಳ್ಳಲಾಗುತ್ತಿದೆ ಎಂದು ಕಿಶೋರ್ ಆರೋಪಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಗೆಲ್ಲುತ್ತಾರೆ ಮತ್ತು ಬಿಜೆಪಿ 100 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

Read Also: ಬಂಗಾಳ ಚುನಾವಣೆ; ಮತದಾನದ ಮಧ್ಯೆ ಹಲವು BJP ಮುಖಂಡರು TMCಗೆ ಸೇರ್ಪಡೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights