ಜನರು ಕೊರೊನಾ ತಡೆಗೆ ಸಹಕಾರ ನೀಡದಿದ್ದರೆ ಲಾಕ್ಡೌನ್ ಅನಿವಾರ್ಯ -ಡಾ. ಕೆ ಸುಧಾಕರ್
ಜನರು ಕೊರೊನಾ ತಡೆಗೆ ಸಹಕಾರ ನೀಡದಿದ್ದರೆ ಲಾಕ್ಡೌನ್ ಅನಿವಾರ್ಯ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ.
ಕರುನಾಡಿನಲ್ಲಿ ಮತ್ತೆ ಕೊರೊನಾ ಭೀತಿ ಹೆಚ್ಚಾಗುತ್ತಿದ್ದು ರಾಜ್ಯ ಸರ್ಕಾರ ಏಪ್ರಿಲ್ 20ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಿದೆ. ಮಾತ್ರವಲ್ಲದೇ ರಾಜ್ಯದೆಲ್ಲೆಡೆ ಕಟ್ಟುನಿಟ್ಟಿನ ಕ್ರಮಗಳಿಗೆ ಆಗ್ರಹಿಸಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಕೆ.ಸುಧಾಕರ್, ಜನರು ಸಹಕಾರ ನೀಡದಿದ್ದರೆ ಲಾಕ್ಡೌನ್ ಅನಿವಾರ್ಯ ಎನ್ನುವ ಮಾತನ್ನು ಹೇಳಿದ್ದಾರೆ. ಹೀಗಾಗಿ ಜನರು ಕಟ್ಟುನಿಟ್ಟಾಗಿ ಕೊರೋನಾ ನಿಯಮಗಳನ್ನು ಪಾಲಿಸಬೇಕು. ಇಲ್ಲವಾದಲ್ಲಿ ಲಾಕ್ಡೌನ್ ಮಾಡುವುದು ಅನಿವಾರ್ಯವಾಗುತ್ತದೆ ಎಂದಿದ್ದಾರೆ.
ಹೌದು… ಕೆಲ ಜನರು ಲಾಕ್ ಡೌನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿಲ್ಲ. ಸಾಮಾಜಿಕ ಅಂತರ, ಮಾಸ್ಕ್, ಸ್ಯಾನಿಟೈಸರ್ ಇವೆಲ್ಲವನ್ನು ಜನ ಕಟ್ಟುನಿಟ್ಟಾಗಿ ಪಾಲಿಸಬೇಕು,ಲಾಕ್ಡೌನ್ಗೆ ಅವಕಾಶ ಮಾಡಿಕೊಡಬೇಡಿ ಎಂದು ಸಚಿವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಮುಂದುವರೆದ ಮಾತನಾಡಿದ ಅವರು, ಕೊರೊನಾ ತಡೆಗೆ ಈಗಾಗಲೆ ಹಲವಾರು ದೇಶಗಳಲ್ಲಿ ಲಾಕ್ ಡೌನ್ ಜಾರಿ ಮಾಡಿದ್ದಾರೆ. ನಮ್ಮಲ್ಲಿ ಜನರು ಜಾಗೃತರಾದರೆ ಯಾವುದೇ ಲಾಕ್ ಡೌನ್ ಅಗತ್ಯ ಬರುವುದಿಲ್ಲ. ಸಾರ್ವಜನಿಕರ ಮೇಲೆ ಜವಾಬ್ದಾರಿ ಇದೆ. ಕೊರೋನಾ ನಿಯಂತ್ರಣವನ್ನು ಜನರೂ ಮಾಡಿದರೆ ನಾವು ಇನ್ನಷ್ಟು ಸಬಲವಾಗಿರುತ್ತೇವೆ ಎಂದರು.
ಇನ್ನು ಅರ್ಹರು ಕೊರೊನಾ ಲಸಿಕೆ ಹಾಕಿಸಿಕೊಳ್ಳಬೇಕು. ಇಂದಿನಿಂದ ಏ.14ರವರೆಗೆ ಲಸಿಕಾ ಉತ್ಸವ ಆಚರಣೆ ಮಾಡುತ್ತಿದ್ದೇವೆ. ಕರ್ನಾಟಕದ ಲಸಿಕಾ ಉತ್ಸವಕ್ಕೆ ಇಲ್ಲಿಂದ ಚಾಲನೆ ನೀಡಿದ್ದೇವೆ ಎಂದರು. ಹೀಗಾಗಿ ಕೊರೊನಾ ಲಸಿಕೆ ಹಾಕಿಸಿಕೊಳ್ಳಿ ನಿಯಮಗಳನ್ನು ಪಾಲಿಸಿ. ಜನ ಸಹಕಾರ ನೀಡದೇ ಹೋದ್ರೆ ಲಾಕ್ ಡೌನ್ ಅನಿವಾರ್ಯ ಎಂದಿದ್ದಾರೆ.

