ದೇಶದಲ್ಲಿ ಮುಂದುವರೆದ ಕೊರೊನಾ ಅರ್ಭಟ: ಒಂದೇ ದಿನ 1.68 ಲಕ್ಷಕ್ಕೂ ಹೆಚ್ಚು ಹೊಸ ಕೇಸ್!

ದೇಶದಲ್ಲಿ ಕೊರೊನಾ ಅರ್ಭಟ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ 1.68 ಲಕ್ಷಕ್ಕೂ ಹೆಚ್ಚು ಹೊಸ ಪ್ರಕರಣಗಳು ದಾಖಲಾಗಿವೆ.

ಹೌದು… ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಅಧಿಕವಾಗುತ್ತಲೇ ಇದೆ. ಮಾರ್ಚ್ ತಿಂಗಳಿನಿಂದಲೂ ಲಕ್ಷಕ್ಕೂ ಹೆಚ್ಚು ಜನರಿಗೆ ಸೋಂಕು ತಗಲುತ್ತಿರುವುದು ದೇಶದ ಜನರಲ್ಲಿ ಭೀತಿ ಹೆಚ್ಚಿಸಿದೆ. ಕಳೆದ 24 ಗಂಟೆಯಲ್ಲಿ 1,68,912 ಹೊಸ ಕೊರೊನಾ ಕೇಸ್ ದಾಖಲಾಗಿದ್ದು, 904 ಸೋಂಕಿತರು ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ವರದಿ ಮಾಡಿದೆ.

ಈವೆರೆಗೆ ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 1,35,27,717ರಷ್ಟಿದ್ದು. ದೇಶದಲ್ಲಿ ಪ್ರಸ್ತುತ 12,01,009 ಸಕ್ರಿಯ ಪ್ರಕರಣಗಳಿವೆ. ಜೊತೆಗೆ 1,21,56,529 ಜನರು ಈ ಕಾಯಿಲೆಯಿಂದ ಚೇತರಿಸಿಕೊಂಡಿದ್ದಾರೆ. ಸಾವಿನ ಸಂಖ್ಯೆ 1,70,179 ಕ್ಕೆ ಏರಿದೆ. 10,45,28,565 ಕೋವಿಡ್ -19 ಲಸಿಕೆಯನ್ನು ಜನರಿಗೆ ನೀಡಲಾಗಿದೆ. ದೇಶದಲ್ಲಿ ಮಹಾರಾಷ್ಟ್ರ, ಪಂಜಾಬ್ ಮತ್ತು ಛತ್ತೀಸ್‌ಗಢ ದೇಶದಲ್ಲಿ ಅತಿ ಹೆಚ್ಚು ಹೊಸ ಕೋವಿಡ್ -19 ಸಾವುಗಳನ್ನು ವರದಿ ಮಾಡಿವೆ.

ಮೂರು ಜಿಲ್ಲೆಗಳಲ್ಲಿ ಮಹಾರಾಷ್ಟ್ರ ಅತಿ ಹೆಚ್ಚು ಆಸ್ಪತ್ರೆಗಳನ್ನು ಹೊಂದಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಆಮ್ಲಜನಕದ ಪೂರೈಕೆಯಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿವೆ.

ಪಂಜಾಬ್‌ನ ಎರಡು ಜಿಲ್ಲೆಗಳಲ್ಲಿ ಯಾವುದೇ ಮೀಸಲಾದ ಕೋವಿಡ್ ಆಸ್ಪತ್ರೆ ಇಲ್ಲ. ಮೂರು ಜಿಲ್ಲೆಗಳಲ್ಲಿ ಆರೋಗ್ಯ ಕಾರ್ಯಕರ್ತರ ಕೊರತೆ ಇದೆ. ಆರ್‌ಟಿಪಿಸಿಆರ್ ಪರೀಕ್ಷಾ ಪ್ರಯೋಗಾಲಯವಿಲ್ಲ.

ಹೀಗಾಗಿ ಕಳೆದ ವಾರ ಎಲ್ಲ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದ ಒಂದು ದಿನದ ನಂತರ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ದೇಶನದ ಮೇರೆಗೆ ತಜ್ಞ ತಂಡಗಳನ್ನು ಈ ರಾಜ್ಯಗಳಿಗೆ ಕಳುಹಿಸಲಾಗಿದೆ.

ಮಹಾರಾಷ್ಟ್ರಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು , ಪಂಜಾಬ್ ಮತ್ತು ಛತ್ತೀಸ್‌ಗಢದ ಆರೋಗ್ಯ ಕಾರ್ಯದರ್ಶಿಗಳಿಗೆ ಪ್ರತ್ಯೇಕ ಪತ್ರಗಳನ್ನು ಬರೆದಿದ್ದಾರೆ. ಇದರಲ್ಲಿ ಗುತ್ತಿಗೆ ಆರೋಗ್ಯ ಕಾರ್ಯಕರ್ತರನ್ನು ನೇಮಿಸಿಕೊಳ್ಳುವುದು ಮತ್ತು ಆಸ್ಪತ್ರೆಯ ಮೂಲಸೌಕರ್ಯಗಳನ್ನು ಹೆಚ್ಚಿಸುವುದು ಸೇರಿದಂತೆ ಕೇಂದ್ರ ತಂಡಗಳಿಗೆ ಎದ್ದಿರುವ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸುವಂತೆ ಕೋರಿದ್ದಾರೆ. ಅವರು ಈ ಮೂರು ರಾಜ್ಯಗಳೊಂದಿಗೆ ಹೆಚ್ಚಿನ ಕಾಳಜಿಗಳನ್ನು ಫ್ಲ್ಯಾಗ್ ಮಾಡಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights