ದೇಶದಲ್ಲಿ ಮುಂದುವರೆದ ಕೊರೊನಾ ಹಾವಳಿ : 1.61 ಲಕ್ಷ ಹೊಸ ಕೇಸ್ – 879 ಜನ ಬಲಿ!
ದೇಶದಲ್ಲಿ ಕೊರೊನಾ 2ನೇ ಅಲೆ ದಿನದಿಂದ ದಿನಕ್ಕೆ ಆತಂಕ ಹೆಚ್ಚಿಸುತ್ತಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ ದಾಖಲಾದ ಕೊರೊನಾ ಸೋಂಕಿತರ ಸಂಖ್ಯೆ ಜನರನ್ನು ಬೆಚ್ಚಿಬೀಳಿಸಿದೆ.
ಹೌದು… ಒಂದೇ ದಿನ ದೇಶದಲ್ಲಿ 1,61,736 ಹೊಸ ಕೋವಿಡ್ ಪ್ರಕರಣಗಳನ್ನು ದಾಖಲಿಸಿದ್ದು, ನಿನ್ನೆಗಿಂತ ಸ್ವಲ್ಪ ಕಡಿಮೆಯಾಗಿದೆ. 97168 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಜೊತೆಗೆ 879 ಜನ ಸೋಂಕಿತರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಒಟ್ಟು ಸಾವಿನ ಸಂಖ್ಯೆ 1,71,058 ಕ್ಕೆ ಏರಿಕೆಯಾಗಿದೆ.
ದೇಶದಲ್ಲಿನ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 1,36,89,453ಕ್ಕೆ ಏರಿಕೆಯಾಗಿದೆ. ಒಟ್ಟು ಗುಣಮುಖಗೊಂಡವರ ಸಂಖ್ಯೆ 1,22,53,697 ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ 12,64,698.
ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಮಹಾರಾಷ್ಟ್ರ ರಾಜ್ಯ ಮೊದಲ ಸ್ಥಾನದಲ್ಲಿದೆ. ಸೋಮವಾರ ರಾಜ್ಯದಲ್ಲಿ 51,751 ಹೊಸ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 5,64,746ಕ್ಕೆ ಏರಿಕೆಯಾಗಿದೆ. ಕೇರಳದಲ್ಲಿ 5,692, ಕರ್ನಾಟಕದಲ್ಲಿ 9,579 ಮತ್ತು ತಮಿಳುನಾಡಿನಲ್ಲಿ 6,711 ಹೊಸ ಪ್ರಕರಣಗಳು ಸೋಮವಾರ ದಾಖಲಾಗಿವೆ. ದೆಹಲಿಯಲ್ಲಿ 11,491, ಉತ್ತರ ಪ್ರದೇಶದಲ್ಲಿ 13,604, ಛತ್ತೀಸ್‌ಗಢ್‌ನಲ್ಲಿ 13,576 ಹೊಸ ಪ್ರಕರಣಗಳು ವರದಿಯಾಗಿವೆ.