ದೇಶದಲ್ಲಿ 1.84 ಲಕ್ಷಕ್ಕೂ ಹೆಚ್ಚು ಹೊಸ ಕೊರೊನಾ ಕೇಸ್ : 1,027 ಸೋಂಕಿತರು ಬಲಿ!

ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಛಾಗುತ್ತಲೇ ಇದ್ದು ಕಳೆದ 24 ಗಂಟೆಯಲ್ಲಿ 1.84 ಲಕ್ಷಕ್ಕೂ ಹೆಚ್ಚು ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗುತ್ತಿವೆ. ಜೊತೆಗೆ 1,027 ಸೋಂಕಿತರು ಬಲಿಯಾಗಿದ್ದಾರೆ.

ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಕಳೆದ 24 ಗಂಟೆಯಲ್ಲಿ ಬುಧವಾರ 1,84,372 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿದ್ದು, ಈ ಮೂಲಕ ಭಾರತದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 1,38,73,825 ಕ್ಕೆ ತಲುಪಿದೆ.

ಕಳೆದ 24 ಗಂಟೆಗಳಲ್ಲಿ 1,027 ಸಾವು ವರದಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 1,72,085 ಕ್ಕೆ ಏರಿದೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 13,65,704 ಆಗಿದ್ದರೆ, 1,23,36,036 ಜನರು ಈ ಕಾಯಿಲೆಯಿಂದ ಚೇತರಿಸಿಕೊಂಡಿದ್ದಾರೆ. ಈವರೆಗೆ ಕನಿಷ್ಠ 11,11,79,578 ಜನರಿಗೆ ಲಸಿಕೆ ನೀಡಲಾಗಿದೆ.

ಕೋವಿಡ್ ಉಲ್ಬಣವನ್ನು ನಿಯಂತ್ರಿಸಲು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಂಗಳವಾರ ಏಪ್ರಿಲ್ 14 ರಂದು ಮೇ 8 ರವರೆಗೆ ರಾಜ್ಯದ ಜನರ ಸಂಚಾರಕ್ಕೆ ಕರ್ಫ್ಯೂ ತರಹದ ನಿರ್ಬಂಧಗಳನ್ನು ಘೋಷಿಸಿದ್ದಾರೆ.

ಸೆಕ್ಷನ್ 144 ರ ಅಡಿಯಲ್ಲಿ ತುರ್ತು ಪರಿಸ್ಥಿತಿಗಳನ್ನು ಹೊರತುಪಡಿಸಿ ನಿಷೇಧಿತ ಆದೇಶಗಳನ್ನು ಬುಧವಾರ ರಾತ್ರಿಯಿಂದ ರಾಜ್ಯದಲ್ಲಿ ವಿಧಿಸಲಾಗುವುದು ಮತ್ತು ಇದು ಮೇ 1 ರವರೆಗೆ ಜಾರಿಯಲ್ಲಿರುತ್ತದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights