ಕುಂಭಮೇಳದಲ್ಲಿ ಕೊರೊನಾ ಅಬ್ಬರ; ಹರಿದ್ವಾರಕ್ಕೆ ತೆರಳಿದ್ದ 1700 ಜನರಿಗೆ ಕೋವಿಡ್ ಪಾಸಿಟಿವ್!
ಹರಿದ್ವಾರದಲ್ಲಿ ನಡೆಯುತ್ತಿರುವ ಬೃಹತ್ ಕುಂಭಮೇಳದಲ್ಲಿ ಭಾಗಿಯಾಗಿದ್ದವರಲ್ಲಿ 1,700ಕ್ಕೂ ಅಧಿಕ ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕುಂಭಮೇಳದಲ್ಲಿ ಪಾಲ್ಗೊಂಡಿದ್ದವರಲ್ಲಿ ಏಪಿಲ್ 10ರಿಂದ 14ರವರೆಗೆ ಒಟ್ಟು 1,701 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಹೊಸ ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಕುಂಭ ಮೇಳ ನಡೆದ ಹರಿದ್ವಾರ, ಡೆಹ್ರಾಡೂನ್, ರಿಷಿಕೇಶ ವ್ಯಾಪ್ತಿಯಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಿದೆ. ಹೆಚ್ಚಿನ ಪ್ರಮಾಣದಲ್ಲಿ ಆರ್ಟಿ-ಪಿಸಿಆರ್ ಪರೀಕ್ಷೆ ನಡೆಸುವಂತೆ ಸರ್ಕಾರ ಈಗಾಗಲೇ ಸೂಚನೆ ನೀಡಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಉತ್ಸವದಲ್ಲಿ ಪಾಲ್ಗೊಂಡಿದ್ದ ಲಕ್ಷಾಂತರ ಜನರು ಮಾಸ್ಕ್ ಧರಿಸದೆ, ಅಂತರವಿಲ್ಲದೆ, ಒಟ್ಟಿಗೆ ನದಿಯಲ್ಲಿ ಸ್ನಾನ ಮಾಡಿರುವುದು ಹಾಗೂ ಸಾಲುಗಟ್ಟಿರುವುದು ಸೋಂಕು ಹೆಚ್ಚಾಗಲು ಕಾರಣ ಎಂದು ಹೇಳಲಾಗಿದೆ.
ಇದನ್ನೂ ಓದಿ: ಬೆಳಗಾವಿಯಲ್ಲಿ ಕಾಂಗ್ರೆಸ್-ಬಿಜೆಪಿ ನೆಕ್ ಟು ನೆಕ್ ಫೈಟ್: ಗೆಲ್ಲುತ್ತಾ BJP?